Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ ವಿದ್ಯಾರ್ಥಿ ಸಂಕೇತ್ ಹತ್ಯೆ ಪ್ರಕರಣ: ಗೃಹ ಸಚಿವ ಜಿ. ಪರಮೇಶ್ವರ್ ನೀಡಿದ ಖಡಕ್ ಸಂದೇಶವೇನು?

24/02/2026 11:57 AM

ಇನ್ಮುಂದೆ ಪಾರ್ಕಿಂಗ್ ಟೆನ್ಷನ್ ಬಿಡಿ: ಉಬರ್ ಆ್ಯಪ್‌ನಲ್ಲೇ ಸಿಗಲಿದೆ ಪಾರ್ಕಿಂಗ್ ಸ್ಲಾಟ್ ಬುಕಿಂಗ್!

24/02/2026 11:57 AM

ALERT : ನಾಯಿ ನೆಕ್ಕುವಿಕೆಯಿಂದ ಅಪಾಯಕಾರಿ ಕಾಯಿಲೆ : 6 ಬಾರಿ ಹೃದಯಾಘಾತಕ್ಕೊಳಗಾದ ಮಹಿಳೆಯ ಕೈ,ಕಾಲು ಕಟ್ !

24/02/2026 11:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕನ್ನಡದ ವಿಚಾರದಲ್ಲಿ ನಮ್ಮ ಸರ್ಕಾರ ರಾಜಿಯಾಗುವುದಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್
KARNATAKA

ಕನ್ನಡದ ವಿಚಾರದಲ್ಲಿ ನಮ್ಮ ಸರ್ಕಾರ ರಾಜಿಯಾಗುವುದಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

By kannadanewsnow0720/06/2024 6:35 PM

ಬೆಂಗಳೂರು :”ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಕನ್ನಡದ ವಿಚಾರದಲ್ಲಿ ರಾಜಿಯಾಗದೆ ಕೆಲಸ ಮಾಡುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ವಿಧಾನಸೌಧ ಆವರಣದಲ್ಲಿ ನಡೆದ ನಾಡದೇವಿ ಭುವನೇಶ್ವರಿ ಕಂಚಿನ ಪ್ರತಿಮೆ ಸ್ಥಾಪನೆ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ವಿಧಾನಸೌಧದ ಆವರಣದಲ್ಲಿ ಅಂಬೇಡ್ಕರ್ ಅವರ, ಬಸವಣ್ಣನವರ, ಕೆಂಪೇಗೌಡರು ಸೇರಿದಂತೆ ಅನೇಕ ನಾಯಕರ ಪ್ರತಿಮೆಗಳಿವೆ. ಈ ಶಕ್ತಿ ಕೇಂದ್ರದಲ್ಲಿ ನಾಡ ದೇವಿ ಭುವನೇಶ್ವರಿ ತಾಯಿ ಪ್ರತಿಮೆ ಇರಬೇಕು. ಇಲ್ಲಿಗೆ ಭೇಟಿ ನೀಡುವವರು ದೇವಿಯ ಆಶೀರ್ವಾದ ಪಡೆದುಕೊಳ್ಳಬೇಕು ಎಂಬುದು ನಮ್ಮ ಆಶಯ. ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷಗಳಾಗಿದ್ದು ಈ ನೆನಪಿಗಾಗಿ 25 ಅಡಿಯ ಕಂಚಿನ ಪ್ರತಿಮೆ ಸ್ಥಾಪಿಸಲಾಗುತ್ತಿದೆ” ಎಂದರು.

“ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಕಡ್ಡಾಯ ಮಾಡಿ ಮೊದಲಬಾರಿಗೆ ಕಾನೂನು ಮಾಡಲಾಯಿತು. ಇದಕ್ಕೆ ಅನೇಕ ಕನ್ನಡ ಸಂಘಟನೆಗಳು ಹೋರಾಟ ಮಾಡಿವೆ. ಒಂದಷ್ಟು ಬಾರಿ ಕಾನೂನು ಕೈಗೆ ತೆಗೆದುಕೊಂಡಾಗ ರಾಜಿಯಾಗದೆ ಕೆಲಸ ಮಾಡಿದ್ದೇವೆ. ಜೊತೆಗೆ ಕನ್ನಡ ಉಳಿಸುವ ಕೆಲಸವನ್ನು ಮಾಡಿದ್ದೇವೆ” ಎಂದು ಹೇಳಿದರು.

“ನಾವು ಯಾರು ಶಾಶ್ವತವಲ್ಲ ಆದರೆ ನಾವು ಮಾಡುವ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ. ಉತ್ತಮವಾದ ಆಲೋಚನೆ ಮಾಡಿರುವ ಕನ್ನಡ ಸಂಸ್ಕೃತಿ ಇಲಾಖೆಗೆ ಅಭಿನಂದನೆಗಳು. ಕನ್ನಡ ಬೆಳೆಯಲಿ, ಉಳಿಯಲಿ” ಎಂದು ಆಶಿಸಿದರು.

ದೇಶದ ಮಕ್ಕಳ ಭವಿಷ್ಯ ಮುಖ್ಯ

ವಿಧಾನಸೌಧದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವ ವೇಳೆ ನೀಟ್ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಅವರು “ನೀಟ್ ಪರೀಕ್ಷೆಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರೇ ಅಕ್ರಮ ನಡೆದಿದೆ ಎಂದು ಒಪ್ಪಿಕೊಂಡಿದ್ದಾರೆ. ಈ ವಿಚಾರವಾಗಿ ಸುಪ್ರೀಂ ಕೋರ್ಟ ಎನ್ ಟಿಎ (ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ) ಗೆ ನೋಟಿಸ್ ನೀಡಿರುವುದು ಉತ್ತಮ ನಡೆ. ನಮ್ಮ ದೇಶದ ಮಕ್ಕಳ ಭವಿಷ್ಯ ಮುಖ್ಯವಾದುದು” ಎಂದು ಹೇಳಿದರು.

ಚನ್ನಪಟ್ಟಣದಿಂದ ಉಪಚುನಾವಣೆಗೆ ಸ್ಪರ್ಧಿಸುವಿರಾ ಎಂದು ಕೇಳಿದಾಗ “ಅದನ್ನು ಪಕ್ಷ ತೀರ್ಮಾನ ಮಾಡುತ್ತದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ 16 ಸಾವಿರ ಮತಗಳು ಬಂದಿದ್ದವು. ಲೋಕಸಭೆಯಲ್ಲಿ 80 ಸಾವಿರ ಮತಗಳು ಬಂದಿವೆ. ರಾಮನಗರ ಜಿಲ್ಲೆಯ 4 ಸ್ಥಾನಗಳಲ್ಲಿ ಮೂವರು ಕಾಂಗ್ರೆಸ್ ಶಾಸಕರಿದ್ದು ಒಂದನ್ನು ಬದಲಾಯಿಸಬೇಕಾಗಿದೆ” ಎಂದು ಮಾರ್ಮಿಕವಾಗಿ ನುಡಿದರು.

Our government will not compromise on Kannada: DK Shivakumar ಕನ್ನಡದ ವಿಚಾರದಲ್ಲಿ ನಮ್ಮ ಸರ್ಕಾರ ರಾಜಿಯಾಗುವುದಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್
Share. Facebook Twitter LinkedIn WhatsApp Email

Related Posts

ಶಿವಮೊಗ್ಗ ವಿದ್ಯಾರ್ಥಿ ಸಂಕೇತ್ ಹತ್ಯೆ ಪ್ರಕರಣ: ಗೃಹ ಸಚಿವ ಜಿ. ಪರಮೇಶ್ವರ್ ನೀಡಿದ ಖಡಕ್ ಸಂದೇಶವೇನು?

24/02/2026 11:57 AM1 Min Read

ಬರೀ ನಡಿಗೆಯಿಂದಲೇ ದೂರವಾಗತ್ತೆ ರೋಗಗಳು: ಮಕ್ಕಳಿಂದ ಹಿಡಿದು ವೃದ್ಧರವರೆಗೆ ಯಾರಿಗೆ ಎಷ್ಟು ನಡಿಗೆ ಸೂಕ್ತ?

24/02/2026 11:45 AM2 Mins Read

ದೇವಸ್ಥಾನದಲ್ಲಿ ಕೊಡುವ ಮಂತ್ರಾಕ್ಷತೆಯಿಂದ ಹೀಗೆ ಮಾಡಿ ದೇವರ ಕೃಪೆಗೆ ಪಾತ್ರರಾಗಿ.

24/02/2026 11:44 AM3 Mins Read
Recent News

ಶಿವಮೊಗ್ಗ ವಿದ್ಯಾರ್ಥಿ ಸಂಕೇತ್ ಹತ್ಯೆ ಪ್ರಕರಣ: ಗೃಹ ಸಚಿವ ಜಿ. ಪರಮೇಶ್ವರ್ ನೀಡಿದ ಖಡಕ್ ಸಂದೇಶವೇನು?

24/02/2026 11:57 AM

ಇನ್ಮುಂದೆ ಪಾರ್ಕಿಂಗ್ ಟೆನ್ಷನ್ ಬಿಡಿ: ಉಬರ್ ಆ್ಯಪ್‌ನಲ್ಲೇ ಸಿಗಲಿದೆ ಪಾರ್ಕಿಂಗ್ ಸ್ಲಾಟ್ ಬುಕಿಂಗ್!

24/02/2026 11:57 AM

ALERT : ನಾಯಿ ನೆಕ್ಕುವಿಕೆಯಿಂದ ಅಪಾಯಕಾರಿ ಕಾಯಿಲೆ : 6 ಬಾರಿ ಹೃದಯಾಘಾತಕ್ಕೊಳಗಾದ ಮಹಿಳೆಯ ಕೈ,ಕಾಲು ಕಟ್ !

24/02/2026 11:57 AM

ಕೇವಲ 500 ರೂ. ಹೂಡಿಕೆ ಮಾಡಿ, ಕಂಪನಿಯ ಮಾಲೀಕರಾಗಿ: ಟ್ಯಾಕ್ಸಿ ಚಾಲಕರಿಗೆ ಕೇಂದ್ರ ಸರ್ಕಾರ ಭರ್ಜರಿ ಗಿಫ್ಟ್!

24/02/2026 11:50 AM
State News
KARNATAKA

ಶಿವಮೊಗ್ಗ ವಿದ್ಯಾರ್ಥಿ ಸಂಕೇತ್ ಹತ್ಯೆ ಪ್ರಕರಣ: ಗೃಹ ಸಚಿವ ಜಿ. ಪರಮೇಶ್ವರ್ ನೀಡಿದ ಖಡಕ್ ಸಂದೇಶವೇನು?

By kannadanewsnow0524/02/2026 11:57 AM KARNATAKA 1 Min Read

ಬೆಂಗಳೂರು : ಶಿವಮೊಗ್ಗದಲ್ಲಿ 10ನೇ ತರಗತಿ ವಿದ್ಯಾರ್ಥಿ ನನ್ನು ಅನ್ಯಕೋಮಿನ ಅಪ್ರಾಪ್ತ ಬಾಲಕರು ಭೀಕರವಾಗಿ ಹೊಡೆದು ಕೊಲೆ ಮಾಡಿದ್ದಾರೆ. ಈ…

ಬರೀ ನಡಿಗೆಯಿಂದಲೇ ದೂರವಾಗತ್ತೆ ರೋಗಗಳು: ಮಕ್ಕಳಿಂದ ಹಿಡಿದು ವೃದ್ಧರವರೆಗೆ ಯಾರಿಗೆ ಎಷ್ಟು ನಡಿಗೆ ಸೂಕ್ತ?

24/02/2026 11:45 AM

ದೇವಸ್ಥಾನದಲ್ಲಿ ಕೊಡುವ ಮಂತ್ರಾಕ್ಷತೆಯಿಂದ ಹೀಗೆ ಮಾಡಿ ದೇವರ ಕೃಪೆಗೆ ಪಾತ್ರರಾಗಿ.

24/02/2026 11:44 AM

BREAKING : ಬೆಂಗಳೂರಲ್ಲಿ ‘ATM’ ದರೋಡೆಗೆ ಯತ್ನಿಸಿದ್ದ ಆರೋಪಿ ಅರೆಸ್ಟ್!

24/02/2026 11:41 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.