ಬೆಂಗಳೂರು : “ಬೆಳಗಾವಿಯಲ್ಲಿ ಇರುವ ಮರಾಠಿ ಭಾಷಿಗರು ಕೂಡ ಕರ್ನಾಟಕದವರೇ. ಎಲ್ಲರೂ ಐಕ್ಯತೆಯಿಂದ ಒಟ್ಟಿಗೆ ಹೋಗುವುದು ಮೊದಲ ಕರ್ತವ್ಯವಾಗಬೇಕು. ಕರ್ನಾಟಕದ ಭೂಮಿ, ನಮ್ಮ ಕನ್ನಡ ಭಾಷೆಗೆ ಮೊದಲ ಆದ್ಯತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಬೆಳಗಾವಿಯ ಗ್ರಾಮೀಣ ಭಾಗದ ಜನರಿಗೆ ನಮ್ಮ ಸರ್ಕಾರ ಸಾಕಷ್ಟು ಅನುಕೂಲತೆಗಳನ್ನು ಕಲ್ಪಿಸಿಕೊಟ್ಟಿದೆ. ಅವರು ನಮ್ಮ ನೀರು, ಗಾಳಿ ಕುಡಿಯುತ್ತಿದ್ದಾರೆ. ನಮ್ಮ ಭೂಮಿಯಲ್ಲಿ ವಾಸವಾಗಿದ್ದಾರೆ, ವ್ಯವಸಾಯ ಮಾಡುತ್ತಿದ್ದಾರೆ. ಈ ಬಜೆಟ್ ಅಲ್ಲಿ ಬೆಳಗಾವಿ ಗ್ರಾಮೀಣ ಭಾಗದ ಕೃಷಿ ಭೂಮಿಗಳಿಗೆ ನೀರನ್ನು ಒದಗಿಸಲು ರೂ.900 ಕೋಟಿ ವೆಚ್ಚದಲ್ಲಿ ಯೋಜನೆ ಘೋಷಣೆ ಮಾಡಲಿದ್ದೇವೆ ಎಂದರು.
ಲೋಕಸಭಾ ಚುನಾವಣೆ ವಿಚಾರವಾಗಿ ಕೇಳಿದಾಗ “ಲೋಕಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಬಹುತೇಕ ಅಂತಿಮ ಹಂತಕ್ಕೆ ತೆಗೆದುಕೊಂಡು ಹೋಗುತ್ತೇವೆ. ಈ ವಿಚಾರವಾಗಿ ನಾನು ಮತ್ತು ಮುಖ್ಯಮಂತ್ರಿಗಳು ಒಂದು ಸುತ್ತಿನ ಮಾತುಕಥೆ ನಡೆಸಿದ್ದೇವೆ. ಈಗ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳ ಜತೆ ಸಭೆ ಮಾಡುತ್ತೇವೆ, ನಂತರ ಸ್ಕ್ರೀನಿಂಗ್ ಸಮಿತಿ ಸದಸ್ಯರು ಚರ್ಚಿಸಿ ಹೈಕಮಾಂಡಿಗೆ ಪಟ್ಟಿ ಕಳಿಸುತ್ತೇವೆ.” ಎಂದರು.
ರಾಜ್ಯಸಭೆಗೆ ರಾಜ್ಯದಿಂದ ಹೆಸರು ಸೂಚಿಸಲಾಗುವುದೇ ಎಂದು ಕೇಳಿದಾಗ, “ರಾಜ್ಯಸಭೆಗೆ ನಾವು ಹೆಸರುಗಳನ್ನು ಸೂಚಿಸುತ್ತೇವೆ. ನಂತರ ಹೈಕಮಾಂಡ್ ಅಂತಿಮ ತೀರ್ಮಾನ ಮಾಡಲಿದೆ” ಎಂದರು.
40 ಪರ್ಸೆಂಟ್ ಕಮಿಷನ್ ವಿಚಾರವಾಗಿ ತನಿಖೆ ನಿಧಾನಗತಿಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ ಎಂದಾಗ “ಹೈಕೋರ್ಟ್ ಅಭಿಪ್ರಾಯವನ್ನು ಗೌರವಿಸುತ್ತೇವೆ. ನಾವು ತನಿಖೆಯನ್ನು ಸಮಿತಿಗೆ ನೀಡಿದ್ದು, ಅವರ ಕರ್ತವ್ಯ ಅವರು ಮಾಡುತ್ತಾರೆ” ಎಂದರು.
BREAKING: ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಗೆ ಕೈ ಅಭ್ಯರ್ಥಿಗಳ ಪಟ್ಟಿ ಪ್ರಕಟ | Rajya Sabha Election 2024
1056 ಖಾಲಿ ಹುದ್ದೆಗಳ ಭರ್ತಿಗೆ ‘UPSC’ ಅಧಿಸೂಚನೆ ಬಿಡುಗಡೆ : ಅರ್ಜಿ ಸಲ್ಲಿಕೆಗೆ ‘ಡೈರೆಕ್ಟ್ ಲಿಂಕ್’ ಇಲ್ಲಿದೆ