ಬೆಂಗಳೂರು: 2032ರ ಹೊತ್ತಿಗೆ 1 ಟ್ರಿಲಿಯನ್ ಡಾಲರ್ ಜಿಡಿಪಿ ಸಾಧಿಸಲು ವಾರ್ಷಿಕ ಶೇ 15-16ರಷ್ಟು ಕೈಗಾರಿಕಾ ಬೆಳವಣಿಗೆ ಸಾಧಿಸುವ ಗುರಿ ನಮ್ಮದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮುಂಬರುವ ಫೆಬ್ರವರಿ 12, 13 ಮತ್ತು 14ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಷ್ಠಿತ ‘ಜಾಗತಿಕ ಹೂಡಿಕೆದಾರರ ಸಮಾವೇಶ’ದ ಭಾಗವಾಗಿ ಬುಧವಾರ ಇಲ್ಲಿ ನಡೆದ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಜ್ಯ ಸರಕಾರವು ಗ್ರಾಮೀಣಾಭಿವೃದ್ಧಿ ಮತ್ತು ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಸಾಧಿಸಲು ಪಣ ತೊಟ್ಟಿದೆ. ಇದಕ್ಕಾಗಿ ರಾಜ್ಯದ ಎಲ್ಲಾ ಭಾಗಗಳಲ್ಲೂ ಕೈಗಾರಿಕಾ ಕ್ಲಸ್ಟರ್ ಗಳನ್ನು ಬೆಳೆಸಲು ತೀರ್ಮಾನಿಸಲಾಗಿದೆ. ಮಹಾನಗರಗಳ ಆಚೆಗೂ ಆರ್ಥಿಕ ಪ್ರಗತಿಯನ್ನು ಕೊಂಡೊಯ್ಯಬೇಕು ಎನ್ನುವುದು ನಮ್ಮ ಸಂಕಲ್ಪವಾಗಿದೆ ಎಂದು ಅವರು ನುಡಿದರು.
ಸ್ಥಳೀಯ ಪ್ರತಿಭೆ ಮತ್ತು ಸಂಪನ್ಮೂಲಗಳನ್ನು ಬಳಸಿಕೊಂಡು, ವಿಶೇಷ ಪರಿಣತ ಉದ್ದಿಮೆಗಳನ್ನು ಬೆಳೆಸಲು ಸರಕಾರ ಬದ್ಧವಾಗಿದೆ. ಇದಕ್ಕಾಗಿ ಎಲೆಕ್ಟ್ರಾನಿಕ್ಸ್, ಆಟೋ ಮತ್ತು ಇ.ವಿ., ಫಾರ್ಮಸುಟಿಕಲ್ಸ್, ಜವಳಿ ಮುಂತಾದ ವಲಯಗಳಿಗೆ ಆದ್ಯತೆ ನೀಡಲಾಗುತ್ತಿದೆ. ಹೆಚ್ಚುಹೆಚ್ಚು ಹೂಡಿಕೆ ಆಕರ್ಷಣೆ ಮತ್ತು ಉದ್ಯೋಗಸೃಷ್ಟಿ ಎರಡಕ್ಕೂ ನಾವು ಒತ್ತು ಕೊಡುತ್ತಿದ್ದೇವೆ ಎಂದು ಅವರು ವಿವರಿಸಿದರು.
Karnataka Rain Alert: ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಯೆಲ್ಲೋ, ರೆಡ್ ಅಲರ್ಟ್ ಘೋಷಣೆ
BREAKING: ICSE, ISC ಸುಧಾರಣಾ ಪರೀಕ್ಷೆ 2024ರ ವೇಳಾಪಟ್ಟಿ ಪ್ರಕಟ | ICSE, ISC improvement exam 2024