2032ರ ಹೊತ್ತಿಗೆ ಕರ್ನಾಟಕ 1 ಟ್ರಿಲಿಯನ್ ಡಾಲರ್ ಜಿಡಿಪಿ ಸಾಧಿಸಲಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: 2032ರ ಹೊತ್ತಿಗೆ 1 ಟ್ರಿಲಿಯನ್ ಡಾಲರ್ ಜಿಡಿಪಿ ಸಾಧಿಸಲು ವಾರ್ಷಿಕ ಶೇ 15-16ರಷ್ಟು ಕೈಗಾರಿಕಾ ಬೆಳವಣಿಗೆ ಸಾಧಿಸುವ ಗುರಿ ನಮ್ಮದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮುಂಬರುವ ಫೆಬ್ರವರಿ 12, 13 ಮತ್ತು 14ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಷ್ಠಿತ ‘ಜಾಗತಿಕ ಹೂಡಿಕೆದಾರರ ಸಮಾವೇಶ’ದ ಭಾಗವಾಗಿ ಬುಧವಾರ ಇಲ್ಲಿ ನಡೆದ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯ ಸರಕಾರವು ಗ್ರಾಮೀಣಾಭಿವೃದ್ಧಿ ಮತ್ತು ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಸಾಧಿಸಲು ಪಣ ತೊಟ್ಟಿದೆ. ಇದಕ್ಕಾಗಿ ರಾಜ್ಯದ … Continue reading 2032ರ ಹೊತ್ತಿಗೆ ಕರ್ನಾಟಕ 1 ಟ್ರಿಲಿಯನ್ ಡಾಲರ್ ಜಿಡಿಪಿ ಸಾಧಿಸಲಿದೆ: ಸಿಎಂ ಸಿದ್ದರಾಮಯ್ಯ