ಚಾಮರಾಜನಗರ : ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದಿದೆ.
ಮಲೆ ಮಹದೇಶ್ವರ ಬೆಟ್ಟದಿಂದ ಸಾರಿಗೆ ಬಸ್ ಕೊಳ್ಳೇಗಾಲಕ್ಕೆ ಬರುತ್ತಿತ್ತು ತಾಳಬೆಟ್ಟದ ಪೊನ್ನಾಚಿ ತಿರುವಿನ ಬಳಿ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಬಸ್ ನಲ್ಲಿ ಇದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಟನಾ ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಬಸ್ ಪಾರ್ಟಿ ಆದ ಹಿನ್ನೆಲೆಯಲ್ಲಿ ಕಿಲೋಮೀಟರ್ ಘಟನೆ ಸಂಚಾರ ಘಟನೆ ಯಾಗಿದ್ದು ಸವಾರರು ಪರದಾಟ ನಡೆಸುತ್ತಿದ್ದಾರೆ.








