ಬೆಂಗಳೂರು: ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(ಕೆಇಎ) ಎ.18 ಮತ್ತು ಎ.19ರಂದು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಉಂಟಾಗಿರುವ ಗೊಂದಲವನ್ನು ಸರಿ ಮಾಡುವ ನಿಟ್ಟಿನಲ್ಲಿ ಈ ಬಗ್ಗೆ ಪರಿಶೀಲಿಸಲು ಸರಕಾರವು ಪ್ರತ್ಯೇಕ ತಜ್ಞರ ಸಮಿತಿಯನ್ನು ರಚಿಸಿದೆ.
ಉನ್ನತ ಶಿಕ್ಷಣ ಇಲಾಖೆ ಏಪ್ರಿಲ್ 18,19 ರಂದು ನಡೆದಿದ್ದ ಸಿಇಟಿ ಪರೀಕ್ಷೆಯಲ್ಲಿ ಔಟ್ ಆಫ್ ಸಿಲಬಸ್ (Out of Syllabus) ಪ್ರಶ್ನೆಗಳ ವಿಚಾರವಾಗಿ ತಜ್ಞರ ಸಮಿತಿ ರಚಿಸಿದೆ.ಜೀವಶಾಸ್ತ್ರ, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ 4 ವಿಷಯಗಳಿಗೂ ಪ್ರತ್ಯೇಕ ತಜ್ಞರ ಸಮಿತಿ ರಚನೆ ಮಾಡಲಾಗಿದೆ. ಸಿಇಟಿ ಪರೀಕ್ಷೆಯಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೇಳಿರುವ ಪ್ರಶ್ನೆ ಪತ್ರಿಕೆ ಗೊಂದಲದ ಬಗ್ಗೆ ವರದಿ ನೀಡುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಉನ್ನತ ಶಿಕ್ಷಣ ಇಲಾಖೆ ತಿಳಿಸಿದೆ.