ನವದೆಹಲಿ: ಭಾರತದ ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್(Ram Nath Kovind) ಅವರ ಅಧಿಕಾರಾವಧಿ ಇಂದು ಕೊನೆಗೊಳ್ಳಲಿದೆ. ಈ ಹಿನ್ನೆಲೆ, ಇಂದು ಕೋವಿಂದ್ ಅವರು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ಶನಿವಾರ ತಿಳಿಸಿದೆ.
ಅಧಿಕೃತ ಹೇಳಿಕೆಯ ಪ್ರಕಾರ, ಈ ಭಾಷಣವನ್ನುಆಲ್ ಇಂಡಿಯಾ ರೇಡಿಯೊದ (AIR) ಸಂಪೂರ್ಣ ರಾಷ್ಟ್ರೀಯ ನೆಟ್ವರ್ಕ್ನಲ್ಲಿ ಸಂಜೆ 7 ಗಂಟೆಯಿಂದ ಪ್ರಸಾರ ಮಾಡಲಾಗುತ್ತದೆ. ಇದು ದೂರದರ್ಶನದ ಎಲ್ಲಾ ಚಾನಲ್ಗಳಲ್ಲಿ ಹಿಂದಿ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಪ್ರಸಾರವಾಗುತ್ತದೆ ಎಂದು ತಿಳಿಸಲಾಗಿದೆ.
ಶುಕ್ರವಾರ ದ್ರೌಪದಿ ಮುರ್ಮು ಅವರು ವಿರೋಧ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಯಶವಂತ್ ಸಿನ್ಹಾ ಅವರ ಸೋಲಿಸಿ ಭಾರತದ ಮುಂದಿನ ರಾಷ್ಟ್ರಪತಿಯಾಗಿ ಆಯ್ಕೆಯಾದರು. ಮುರ್ಮು ಅವರು ಸೋಮವಾರ(ನಾಳೆ) ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಭಾರತದ 15ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
Big news: ನಾಳೆ ಭಾರತದ 15 ನೇ ರಾಷ್ಟ್ರಪತಿಯಾಗಿ ʻದ್ರೌಪದಿ ಮುರ್ಮುʼ ಪ್ರಮಾಣ ವಚನ ಸ್ವೀಕಾರ!
Bank Holidays in August : ಬ್ಯಾಂಕ್ ಗ್ರಾಹಕರೇ ಗಮನಿಸಿ : ಇಲ್ಲಿದೆ ಆಗಸ್ಟ್ ತಿಂಗಳ ಬ್ಯಾಂಕ್ ರಜೆ ದಿನಗಳ ಪಟ್ಟಿ
Video: ಜಲಾವೃತಗೊಂಡಿದ್ದ ದೊಡ್ಡ ಚರಂಡಿಯಲ್ಲಿ ಸಿಲುಕಿದ ಶಾಲಾ ಬಸ್… ಸ್ಥಳೀಯರಿಂದ ಮಕ್ಕಳ ರಕ್ಷಣೆ