ಸುಡಾನ್: ಸುಡಾನ್ ನ ಪಶ್ಚಿಮ ಡಾರ್ಫರ್ ಪ್ರದೇಶದಲ್ಲಿ ಸಂಭವಿಸಿದ ಭಾರಿ ಭೂಕುಸಿತದಲ್ಲಿ 1,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಈ ಪ್ರದೇಶವನ್ನು ನಿಯಂತ್ರಿಸುವ ಬಂಡುಕೋರ ಗುಂಪು ಸೋಮವಾರ ತಡರಾತ್ರಿ ತಿಳಿಸಿದೆ.
ಮಾರಾ ಪರ್ವತಗಳ ತಾರಾಸಿನ್ ಗ್ರಾಮದಲ್ಲಿ ಭಾನುವಾರ “ಬೃಹತ್ ಮತ್ತು ವಿನಾಶಕಾರಿ ಭೂಕುಸಿತ” ಸಂಭವಿಸಿದೆ ಎಂದು ಸುಡಾನ್ ಲಿಬರೇಶನ್ ಮೂವ್ಮೆಂಟ್ / ಆರ್ಮಿ ಹೇಳಿಕೆಯಲ್ಲಿ ತಿಳಿಸಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಎಲ್ಲಾ ಗ್ರಾಮ ನಿವಾಸಿಗಳು ಅಂದರೆ ಒಂದು ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಅಂದಾಜಿಸಲಾಗಿದೆ, ಕೇವಲ ಒಬ್ಬರು ಮಾತ್ರ ಬದುಕುಳಿದಿದ್ದಾರೆ