ಚಿತ್ರದುರ್ಗ: ಜಿಲ್ಲೆಯಲ್ಲಿ ಖಾಸಗಿ ಬಸ್ ಒಂದು ಮರಕ್ಕೆ ಡಿಕ್ಕಿಯಾದ ಪರಿಣಾಮ 15ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ.
ಚಿತ್ರದುರ್ಗ ತಾಲ್ಲೂಕಿನ ಮದಕರಿಪುರ ಗ್ರಾಮದ ಬಳಿಯಲ್ಲಿ ಖಾಸಗಿ ಬಸ್ ಮರಕ್ಕೆ ಡಿಕ್ಕಿಯಾಗಿದೆ. ಈ ಪರಿಣಾಮ 15 ಜನರು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಬಸ್ ಅಪಘಾತದಲ್ಲಿ ಗಾಯಗೊಂಡಿರುವಂತ ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇನ್ನೂ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಮರಕ್ಕೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು RBI ಹೊಸ ಘೋಷಣೆ: ಮಾಜಿ ಶಾಸಕ ತೇಲ್ಕೂರ ಅಭಿನಂದನೆ
ಇನ್ಮುಂದೆ ಆನ್‌ಲೈನ್ ಮೂಲಕ NEET ಪರೀಕ್ಷೆ.?: ಶೀಘ್ರ ನಿರ್ಧಾರವೆಂದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ | NEET exam