ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಬಳಿಯಲ್ಲಿ ಮಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದಂತ ಖಾಸಗಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಪರಿಣಾಮ ಬಸ್ಸಿನಲ್ಲಿದ್ದಂತ 15ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಮಂಗಳೂರಿನಿಂದ ಖಾಸಗಿ ಬಸ್ ನಲ್ಲಿ ಸಾಗರದ ಜೋಗದ ಜಲಪಾತ ವೀಕ್ಷಣೆಗಾಗಿ 55 ಜನರು ಆಗಮಿಸುತ್ತಿದ್ದರು. ಈ ಬಸ್ ಅರಳಗೋಡು ಗ್ರಾಮ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ.
ಬಸ್ ಪಲ್ಟಿಯಾಗಿ ಉಂಟಾಗದಂತ ಅಪಘಾತದಲ್ಲಿ ಗಾಯಗೊಂಡಿರುವಂತ ಗಾಯಾಳುಗಳನ್ನು ಕಾರ್ಗಲ್ ಹಾಗೂ ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಕಾರ್ಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಮೂರ್ತಿ ಸಾಥ್ ನೀಡಿದ್ದಾರೆ. ಅಪಘಾತದ ಸಂದರ್ಭದಲ್ಲಿ 55 ಪ್ರಯಾಣಿಕರು ಬಸ್ಸಿನಲ್ಲಿ ಇದ್ದರು ಎಂಬುದಾಗಿ ತಿಳಿದು ಬಂದಿದೆ.
ಈ ವಿಷಯ ತಿಳಿದು ಕಾರ್ಗಲ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲಿಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾದರು. ಅಲ್ಲದೇ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.