ಹಾವೇರಿ: ಜಿಲ್ಲೆಯಲ್ಲಿ ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿರುವಂತ ಘಟನೆ ನಡೆದಿದೆ.
ಬೆಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ಗೋವಾಗೆ ತೆರಳುತ್ತಿದ್ದಂತ ಖಾಸಗಿ ಬಸ್ ಒಂದು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮುಂಜಾನೆ 4 ಗಂಟೆಗೆ ನಿದ್ದೆ ಮಂಪರಿನಲ್ಲಿ ಇದ್ದಂತ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಖಾಸಗಿ ಬಸ್ ಪಲ್ಟಿಯಾದ ಘಟನೆಯಲ್ಲಿ ಅದರಲ್ಲಿದ್ದಂತ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರನ್ನು ಹಾವೇರಿಯ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಸಂಬಂಧ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲೆಬನಾನ್, ಸಿರಿಯಾದ ವಿವಿಧೆಡೆ ಪೇಜರ್ ಸರಣಿ ಸ್ಪೋಟ: 9 ಜನರು ಸಾವು, 2,800ಕ್ಕೂ ಹೆಚ್ಚು ಮಂದಿಗೆ ಗಾಯ