ಕಾರವಾರ: ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಪಲ್ಟಿಯಾದ ಪರಿಣಾಮ 17ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವಂತ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಕಣ್ಣಿಗೇರಿ ಬಳಿಯಲ್ಲಿ ಶಿರಸಿಯಿಂದ ಬೆಳಗಾವಿಗೆ ಹೋಗುತ್ತಿದ್ದಂತ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ 17ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇನ್ನೂ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಈ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
SHOCKING : `Whats App’ ನಲ್ಲಿ ಮದುವೆಯಾದ ಪಿಯು ವಿದ್ಯಾರ್ಥಿಗಳು : `ಚಾಟಿಂಗ್’ ಫೋಟೋ ವೈರಲ್.!