ಬೆಂಗಳೂರು: ಶಾಲೆಯಲ್ಲಿ ನೀಡಿದಂತ ಮಧ್ಯಾಹ್ನದ ಬಿಸಿಯೂಟ ಸೇವಿಸಿದಂತ ಇಬ್ಬರು ಶಿಕ್ಷಕರು ಸಹಿತ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರೋ ಘಟನೆ ಸೀನಪ್ಪನಹಳ್ಳಿಯ ಅಂಬಾಭವಾನಿ ಅನುದಾನಿತ ಪ್ರೌಢ ಶಾಲೆಯಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಸೀನಪ್ಪನಹಳ್ಳಿಯಲ್ಲಿರುವಂತ ಅಂಬಾಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ನಿನ್ನೆ ಮಧ್ಯಾಹ್ನ ಶಾಲೆಯಲ್ಲಿ ನೀಡಲಾಗಿದ್ದಂತ ಮೊಸರನ್ನ ಸೇವಿಸಿದಂತ ವಿದ್ಯಾರ್ಥಿಗಳು ಮನೆಗೆ ತೆರಳಿದ್ದಾರೆ.
ಮನೆಗೆ ತೆರಳಿಂದಂತ ವಿದ್ಯಾರ್ಥಿಗಳಲ್ಲಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ವಾಂತಿ, ಬೇಧಿ ಕಾಣಿಸಿಕೊಂಡು ಅಸ್ವಸ್ಥಗೊಂಡಿದ್ದಾರೆ. ಅವರನ್ನು ಕೂಡಲೇ ಹಿಬ್ಬಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪೋಷಕರು ಸೇರಿಸಿದ್ದಾರೆ.
ಇನ್ನೂ 10 ಮಕ್ಕಳು ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಅವರನ್ನು ಕುಣಿಗಲ್ ನ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಟಿಹೆಚ್ಓ, ಆರೋಗ್ಯ ಅಧಿಕಾರಿಗಳು ವಿದ್ಯಾರ್ಥಿಗಳ ಆರೋಗ್ಯವನ್ನು ವಿಚಾರಿಸಿ, ಮಾಹಿತಿ ಪಡೆದಿದ್ದಾರೆ.
ಇದೀಗ ಅನೇಕ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಮುಂದುವರೆದಿದ್ದು, ಪ್ರಾಣಾಪಾಯದಿಂದ ಪಾರಾಗಿರೋದಾಗಿ ತಿಳಿದು ಬಂದಿದೆ.
BREAKING NEWS: ‘ಮ್ಯಾನ್ಮಾರ್’ ಜೊತೆಗಿನ ‘ಮುಕ್ತ ಸಂಚಾರ ವ್ಯವಸ್ಥೆ’ಯನ್ನು ರದ್ದುಗೊಳಿಸಿದ ‘ಭಾರತ’
Janaspanda: ಸಿಎಂ ‘ಜನಸ್ಪಂದನ’: ವಿಶೇಷ ಚೇತನ ವ್ಯಕ್ತಿಗೆ ‘ಸಿದ್ಧರಾಮಯ್ಯ ಮಾನವೀಯ ನೆರವು’