ಚಿತ್ರಿದುರ್ಗ: ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ದಿದ್ದಂತ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರಿಂದಾಗಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ನಗರದ ಸೆಂಟ್ ಆಂತೋನಿ ಶಾಲೆಯ ಶಾಲಾ ಬಸ್ ಒಂದು ದಾಂಡೇಲಿ ಸಮೀಪದ ಮೌಲಂಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಪರಿಣಾಮ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಇಂದು ಬೆಳಿಗ್ಗೆ ಮೌಲಗಿಯ ಬಳಿಯ ಹೋಂ ಸ್ಟೇನಲ್ಲಿ ತಂಗಿದ್ದಂತ ವಿದ್ಯಾರ್ಥಿಗಳನ್ನು ಜಲಸಾಹಸ ಕ್ರೀಡೆಯನ್ನು ತೋರಿಸಿಕೊಂಡು ವಾಪಾಸ್ಸು ಕರೆದೊಯ್ಯಲಾಗುತ್ತಿತ್ತು. ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ.
ಮೂರು ಬಸ್ಸುಗಳಲ್ಲಿ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯಲಾಗಿತ್ತು. 50 ವಿದ್ಯಾರ್ಥಿಗಳ ಪೈಕಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯವಾಗಿದೆ. ದಾಂಡೇಲಿಯ ಜೋಯಿಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.