ಮಂಡ್ಯ: ಜಿಲ್ಲೆಯ ದೇವರ ಪ್ರಸಾದ ಸೇವಿಸಿದಂತ ಒಂದೇ ಗ್ರಾಮದ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ನರಹಳ್ಳಿಯಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ನರಹಳ್ಳಿಯಲ್ಲಿ ನಿನ್ನೆ ಗ್ರಾಮದ ಚನ್ನಬೀರೇಶ್ವರ ಹಬ್ಬವನ್ನು ನಡೆಸಲಾಗಿತ್ತು. ಈ ಹಬ್ಬದ ಸಂದರ್ಭದಲ್ಲಿ ಪ್ರಸಾದವನ್ನು ಜನರಿಗೆ ವಿತರಿಸಲಾಗಿತ್ತು. ಇಂತಹ ಪ್ರಾಸದ ತಿಂದಂತ 50ಕ್ಕೂ ಹೆಚ್ಚು ಜನರಿಗೆ ವಾಂತಿ, ಬೇಧಿ ಕಾಣಿಸಿಕೊಂಡಿದೆ. ಹೀಗಾಗಿ ಅಸ್ವಸ್ಥರಾಗಿದ್ದಾರೆ. ಅವರನ್ನು ಪಾಂಡವಪುರ ತಾಲ್ಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಇದೀಗ ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಜನರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ.
Crime News: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ತೋಟದ ಮನೆಯಲ್ಲಿದ್ದ ದಂಪತಿಗಳನ್ನು ಬರ್ಬರವಾಗಿ ಕಗ್ಗೊಲೆ
ನಾಳೆ ಗೃಹಲಕ್ಷ್ಮಿ ಹಣ ಬಿಡುಗಡೆಗೆ ಆಗ್ರಹಿಸಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಜೆಡಿಎಸ್ ಪ್ರತಿಭಟನೆ