ಉಡುಪಿ: ಜಿಲ್ಲೆಯಲ್ಲಿ ಗ್ರಾಮ ಪಂಚಾಯ್ತಿ ನಿರ್ಲಕ್ಷ್ಯಕ್ಕೆ ಕಲುಷಿತ ನೀರು ಸೇವಿಸಿ 500ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ಉಪ್ಪಂದ ಗ್ರಾಮದ ಮಡಿಕಲ್ ಮತ್ತು ಕರ್ಕಿಕಳಿಯಲ್ಲಿ ಕಳೆದ ಒಂದು ವಾರದಿಂದ ಕಲುಷಿತ ನೀರು ಸೇವಿಸಿ 500ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದೆ.
ಗ್ರಾಮ ಪಂಚಾಯ್ತಿ ನಿರ್ಲಕ್ಷ್ಯದಿಂದಾಗಿ ಕಲುಷಿತ ನೀರು ಸೇವಿಸಿ ಕರ್ಕಿಕಳಿ ಮತ್ತು ಕಾಸನಾಡಿ ಪ್ರದೇಶದ ವಾರ್ಡ್ ನಂ.6, 7ರಲ್ಲಿ 500ಕ್ಕೂ ಹೆಚ್ಚು ಗ್ರಾಮಸ್ಥರು ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಮನೆಯಲ್ಲಿನ ಎರಡು ಮೂರು ಮಂದಿಗೆ ವಾಂತಿ, ಬೇಧಿ ಕಾಣಿಸಿಕೊಂಡಿದೆ. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
‘ಸಾವರ್ಕರ್ ಮಾನನಷ್ಟ ಮೊಕದ್ದಮೆ’: ರಾಹುಲ್ ಗಾಂಧಿಗೆ ಪುಣೆ ಕೋರ್ಟ್ ಸಮನ್ಸ್