ಬೆಂಗಳೂರು : ನಗರದ ಸಂಚಾರ ಪೂರ್ವ ವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳ ಬಳಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರ ವಿರುದ್ಧ ಸಂಚಾರ ಪೊಲೀಸರು 510ಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಿದ್ದಾರೆ.
ಶಾಲಾ-ಕಾಲೇಜುಗಳ బళి ಅಪ್ರಾಪ್ತ ಮಕ್ಕಳು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸುತ್ತಿದ್ದಾರೆ. ವಾಹನ ಇಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೋಷಕರಿಂದ ಸಾಮಾಜಿಕ ಜಾಲತಾಣಗಳಲ್ಲಿ ದೂರುಗಳು ಬಂದ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ಶನಿವಾರ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.
ಏಕಮುಖ ಸಂಚಾರ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ 154 ಪ್ರಕರಣಗಳು, ಹೆಲೈಟ್ ಧರಿಸದೆ ದ್ವಿಚಕ್ರ ವಾಹನ ಚಾಲನೆಯ 328 ಪ್ರಕರಣಗಳು, ತ್ರಿಬಲ್ ರೈಡಿಂಗ್ 17 ಪ್ರಕರಣಗಳು, ಪಾದಾಚಾರಿ ಮಾರ್ಗ ದಲ್ಲಿ ದ್ವಿಚಕ್ರ ವಾಹನ ಚಾಲನೆಯ 11 ಪ್ರಕರಣಗಳು ಸೇರಿದಂತೆ ವಿವಿಧ ಸಂಚಾರ ನಿಯಮ ಉಲ್ಲಂಘಿಸಿದ ಸವಾರರ ವಿರುದ್ಧ 510ಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪೈಕಿ 10 ವಾಹನ ಸವಾರರು ಅಪ್ರಾ ಪ್ತರಾಗಿರುವ ಹಿನ್ನೆಲೆಯಲ್ಲಿ ಅವರಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಪೋಷಕರು ಮತ್ತು ವಾಹನ ಗಳ ಮಾಲೀಕರ ವಿರುದ್ದ ಭಾರತೀಯಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಮಕ್ಕಳ ಪೋಷಕರು ಹಾಗೂ ಮಕ್ಕ ಳಿಗೆ ಎಚ್ಚರಿಕೆ ನೀಡಿ ಸಂಚಾರ ನಿಯಮ ಪಾಲನೆಯ ಮಹತ್ವದ ಬಗ್ಗೆ ಅರಿವು ಮೂಡಿಸಲಾಗಿದೆ. ಮುಂದಿನ ದಿನಗ ಳಲ್ಲಿ ಶಾಲಾ, ಕಾಲೇಜುಗಳ ಬಳಿ ಈ ವಿಶೇಷ ಕಾರ್ಯಾಚರಣೆ ಮುಂದುವ ರೆಯಲಿದೆ ಎಂದು ನಗರ ಪೂರ್ವ ಸಂಚಾರ ವಿಭಾಗದ ಡಿಸಿಪಿ ಕುಲದೀಪ್ ಕುಮಾರ್ ಆರ್.ಜೈನ್ ತಿಳಿಸಿದ್ದಾರೆ.