ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಸಾತಪುರ ಗ್ರಾಮದಲ್ಲಿ ನಗರಸಭೆ ಪೂರೈಸಿದಂತ ನೀರು ಕುಡಿದಂತ 70ಕ್ಕೂ ಹೆಚ್ಚು ಜನರಿಗೆ ವಾಂತಿ, ಬೇಧಿ ಕಾಣಿಸಿಕೊಂಡು, ಅಸ್ವಸ್ಥಗೊಂಡಿರೋ ಘಟನೆ ನಡೆದಿದೆ. ಅಸ್ವಸ್ಥರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

BREAKING: ಮುಂಬೈ ಮಾಜಿ ಪೊಲೀಸ್ ಆಯುಕ್ತ ಸಂಜಯ್ ಪಾಂಡೆಗೆ ಇ.ಡಿ ಸಮನ್ಸ್

ವಿಜಯಪುರ ಜಿಲ್ಲೆಯ ಇಂಡಿ ತಾಲಕೂಿನ ಸಾತಪುರ ಗ್ರಾಮದಲ್ಲಿ ನಿನ್ನೆ ಬೆಳಿಗ್ಗೆಯಿಂದ ಇಂಡಿ ಪಟ್ಟಣದಿಂದ ಪೂರೈಸಿದಂತ ನೀರು ಕುಡಿದ ಗ್ರಾಮದ 70ಕ್ಕೂ ಹೆಚ್ಚು ಜನರಲ್ಲಿ ವಾಂತಿ, ಬೇಧಿ ಕಾಣಿಸಿಕೊಂಡಿದೆ. ಕೂಡಲೇ ಅಸ್ವಸ್ಥಗೊಂಡವರನ್ನು ಇಂಡಿ ತಾಲೂಕು ಆಸ್ಪತ್ರೆಗೆ, ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಡಿಕೆಶಿಗೆ ಮಾಹಿತಿ ಇಲ್ಲದೆ ರಾಹುಲ್ ಬರುತ್ತಾರೆಯೇ?: ರಾಜ್ಯ ಕಾಂಗ್ರೆಸ್ಸಿಗೆ ಅಧ್ಯಕ್ಷ ಯಾರು ಎನ್ನುವುದೇ ಈಗ ಯಕ್ಷ ಪ್ರಶ್ನೆ – BJP

ಈ ವಿಷಯ ತಿಳಿದು ಅಸ್ವಸ್ಥಗೊಂಡು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಂತ ಜನರನ್ನು ಶಾಸಕ ಯಶವಂತರಾಯಗೌಡ ಪಾಟೀಲ್ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಈ ಘಟನೆ ಸಂಬಂಧ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Share.
Exit mobile version