ಬೆಂಗಳೂರು : ರಾಜ್ಯದ ಆಸ್ತಿ ಮಾಲೀಕರೇ ಗಮನಿಸಿ, ರಾಜ್ಯ ಸರ್ಕಾರವು ಎ ಖಾತಾ ನೀಡುವ ಬಗ್ಗೆ ಮಹತ್ವದ ಸ್ಪಷ್ಟನೆ ನೀಡಿದೆ.
ಬೆಂಗಳೂರು ನಗರದಲ್ಲಿ ಭೂ ಪರಿವರ್ತನೆಯಾಗದ ಮತ್ತು ಕಂದಾಯ ನಿವೇಶನಗಳಲ್ಲಿ ನಿರ್ಮಿಸಿಕೊಂಡಿರುವ ಕಟ್ಟಡ ಮತ್ತು ನಿವೇಶನಗಳಿಗೆ ಬಿ ಖಾತಾದಿಂದ ಪರಿವರ್ತನೆ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿರುವುದು ನಿಜವೇ?
ಗ್ರಾಮೀಣ ಪ್ರದೇಶದಲ್ಲಿ ಭೂ ಪರಿವರ್ತನೆಯಾಗದ ಮತ್ತು ಕಂದಾಯ ನಿವೇಶನಗಳಲ್ಲಿ ನಿರ್ಮಿಸಿಕೊಂಡಿರುವ ಕಟ್ಟಡ ಮತ್ತು ನಿವೇಶನಗಳಿಗೆ ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿರುವುದಿಲ್ಲ.
ಅದೇ ರೀತಿ ಗ್ರಾಮೀಣ ಪ್ರದೇಶಗಳಲ್ಲಿ ಮತ್ತು ಗ್ರಾಮ ಠಾಣಾಗಳಲ್ಲಿ ಭೂ-ಪರಿವರ್ತನೆಯಾಗದ ಮತ್ತು ಕಂದಾಯ ನಿವೇಶನಗಳಲ್ಲಿ ಕಟ್ಟಿಕೊಂಡಿರುವ ಮನೆ ಮತ್ತು ಖಾಲಿ ನಿವೇಶನಗಳಿಗೆ ಎ ಖಾತಾ ಮಾದರಿಯ/ ಇ-ಸ್ವತ್ತು ನೀಡಿ ಸಕ್ರಮಗೊಳಿಸುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗುವುದಿಲ್ಲವೇ;
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು, 2025ರ ನಿಯಮ 8ರಲ್ಲಿ ಭೂ-ಪರಿವರ್ತನೆಯಾಗದ ಮತ್ತು ಕಂದಾಯ ನಿವೇಶನಗಳಲ್ಲಿ ಕಟ್ಟಿಕೊಂಡಿರುವ ಮನೆ ಮತ್ತು ಖಾಲಿ ನಿವೇಶನಗಳಿಗೆ ಖಾತಾ ನೀಡುವ ಬಗ್ಗೆ ವಿವರಿಸಲಾಗಿರುತ್ತದೆ.









