ಚಾಮರಾಜನಗರ : ಚಾಮರಾಜನಗರದಲ್ಲಿ ಆಕ್ಸಿಜನ್ ದುರಂತ ಪ್ರಕರಣಕ್ಕೆ ಇದೀಗ ಇಂದು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯಗೆ ತನಿಖಾ ವರದಿ ಸಲ್ಲಿಸಲಾಗಿದೆ. ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾರಿಂದ ವರದಿ ಸಲ್ಲಿಸಲಾಯಿತು.
ಕೋವಿಡ್ ವೇಳೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ದುರಂತ ಸಂಭವಿಸಿತ್ತು.ಈ ಪ್ರಕಾರಣಕ್ಕೆ ಸಂಬಂಧಪಟ್ಟಂತೆ ಹಾಲಿ ಸಂಸದ ಡಾ.ಕೆ ಸುಧಾಕರ್ ಅವರ ವಿರುದ್ಧ ಕೂಡ ಅಕ್ರಮ ಆರೋಪ ಕೇಳಿ ಬಂದಿತ್ತು. ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಪ್ರಕರಣದ ತನಿಖೆಗೆ ಸೂಚನೆ ನೀಡಲಾಗಿತ್ತು. ಇದೀಗ ಕುನ್ಹಾ ಅವರು ಸಿಎಂ ಸಿದ್ದರಾಮಯ್ಯಗೆ ವರದಿ ಸಲ್ಲಿಸಿದ್ದಾರೆ.








