BIG NEWS: ಆ.3ರಿಂದ ಬೆಂಗಳೂರಿನಿಂದ ಮೈಸೂರಿಗೆ ‘ಪಾದಯಾತ್ರೆ’: ಬಿ.ವೈ ವಿಜಯೇಂದ್ರ

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣ, ದಲಿತರ ಹಣವನ್ನು ಬೇರೆ ಉದ್ದೇಶಕ್ಕೆ ವರ್ಗಾವಣೆ ಮಾಡಿದ್ದನ್ನು ಖಂಡಿಸಿ ಆಗಸ್ಟ್ 3ರಿಂದ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ- ಜೆಡಿಎಸ್ ಪಕ್ಷಗಳ ಪಾದಯಾತ್ರೆ ನಡೆಸಲಾಗುವುದು ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಇಂದು ನಗರದಲ್ಲಿ ನಡೆದ ಬಿಜೆಪಿ- ಜೆಡಿಎಸ್ ಪಕ್ಷಗಳ ಮುಖಂಡರ ಸಭೆಯಲ್ಲಿ ಈ ಕುರಿತು ಚರ್ಚಿಸಿ ನಿರ್ಧರಿಸಲಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆಯಲ್ಲಿ ತೆರಳಲು 7 ದಿನ ಬೇಕಾಗಲಿದೆ. ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ, ಮಾನ್ಯ ಎಚ್.ಡಿ.ಕುಮಾರಸ್ವಾಮಿ ಅವರು ಕೂಡ ಪಾದಯಾತ್ರೆಯಲ್ಲಿ ಭಾಗವಹಿಸುತ್ತಾರೆ. … Continue reading BIG NEWS: ಆ.3ರಿಂದ ಬೆಂಗಳೂರಿನಿಂದ ಮೈಸೂರಿಗೆ ‘ಪಾದಯಾತ್ರೆ’: ಬಿ.ವೈ ವಿಜಯೇಂದ್ರ