ಬೆಂಗಳೂರು : ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿಗೆ ತೊಗಲುಗೊಂಬೆ ಆಟದ ಹಿರಿಯ ಕಲಾವಿದೆಯಾಗಿರುವ ಜಿಲ್ಲೆಯ ಮೋರನಾಳ ಗ್ರಾಮದ ಭೀಮವ್ವ ದೊಡ್ಡಬಳ್ಳಪ್ಪ ಶಿಳ್ಳೇಕ್ಯಾತ ಅವರಿಗೆ ಒಲಿದು ಬಂದಿದೆ. ಈ ಒಂದು ಪ್ರಶಸ್ತಿ ಒಲಿದು ಬಂದಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೀಮವ್ವ ಅವರಿಗೆ ಟ್ವೀಟ್ ಮುಖಾಂತರ ಅಭಿನಂದನೆ ಸಲ್ಲಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ತೊಗಲುಗೊಂಬೆಯಾಟ ಕಲಾವಿದೆ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ ಅವರು 2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವುದು ಇಡೀ ನಾಡು ಹೆಮ್ಮೆಪಡುವಂತದ್ದು. ಸರಿಸುಮಾರು 7 ದಶಕಗಳ ಕಾಲ ತೊಗಲುಗೊಂಬೆಯಾಟವನ್ನೇ ಬದುಕಿನ ಹಾದಿಯಾಗಿಸಿಕೊಂಡು, ನೆಲದ ಕಲೆಯನ್ನು ದೇಶ – ವಿದೇಶಗಳಿಗೂ ಪರಿಚಯಿಸಿದ ಹಿರಿಯ ಜೀವ ಭೀಮವ್ವನವರು ಈ ಗೌರವಕ್ಕೆ ಅತ್ಯಂತ ಅರ್ಹರು ಎನ್ನುವುದು ನನ್ನ ಭಾವನೆ.
ಪ್ರಶಸ್ತಿ ವಿಜೇತ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ ಅವರಿಗೆ ನನ್ನ ಹೃದಯಪೂರ್ವಕ ಅಭಿನಂದನೆಗಳು. ಗ್ರಾಮೀಣ ಕಲೆ, ಜಾನಪದ ಸಂಸ್ಕೃತಿಗಳು ಇತಿಹಾಸದ ಪುಟ ಸೇರುತ್ತಿರುವ ಇಂದಿನ ಆಧುನಿಕ ಕಾಲಘಟ್ಟದಲ್ಲಿ ಕಲಾಸೇವೆಗೆ ಬದುಕು ಸಮರ್ಪಿಸಿ, ಅದನ್ನು ಜನಮಾನಸದಲ್ಲಿ ಉಳಿಯುವಂತೆ ಮಾಡುತ್ತಿರುವ ಭೀಮವ್ವನವರ ಸೇವೆ – ಸಾಧನೆ ತಲೆಮಾರುಗಳಿಗೆ ಪ್ರೇರಣೆ ಎಂದು ಅವರಿಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ತಿಳಿಸಿದರು.
ಭೀಮವ್ವರ ಹಿನ್ನೆಲೆ
ಕೊಪ್ಪಳದ ಇರಕಲ್ಲಗಡಾದ ಹನುಮಟ್ಟಿಯ ಸಂಜೀವಪ್ಪ ಹೊಳೆಯಮ್ಮರ ಮಗಳಾದ ಭೀಮವ್ವ, ಕೊಪ್ಪಳ ತಾಲೂಕಿನ ಮೋರನಾಳ ಗ್ರಾಮದಲ್ಲಿ 1929 ರಲ್ಲಿ ಜನಿಸಿದ್ದರು. ತಮ್ಮ 14ನೇ ವಯಸ್ಸಿನಿಂದ ಇಲ್ಲಿಯವರೆಗೂ ತೊಗಲುಗೊಂಬೆಯಾಟವನ್ನ ಕುಲ ಕಸುಬಾಗಿ ಮಾಡುತ್ತಾ ಬಂದಿದ್ದಾರೆ. ಸದ್ಯ ಇದೇ ಕಲೆಯಲ್ಲಿ ಮಹತ್ತರ ಸಾಧನೆ ಕೂಡ ಮಾಡಿದ್ದಾರೆ. ಅಮೇರಿಕ, ಪ್ಯಾರಿಸ್, ಇಟಲಿ, ಇರಾನ್, ಇರಾಕ್, ಸ್ವಿಟ್ಜರ್ಲೆಂಡ್ ಮತ್ತು ಹಾಲೆಂಡ್ ಮುಂತಾದ ದೇಶಗಳಲ್ಲಿ ರಾಮಾಯಣ, ಮಹಾಭಾರತದಂತಹ ಮಹಾಕಾವ್ಯ ಹಾಗೂ ಪ್ರಸ್ತುತ ವಿದ್ಯಮಾನಗಳನ್ನು ತೊಗಲುಗೊಂಬೆಯಾಟದ ಮೂಲಕ ಪ್ರದರ್ಶನ ನೀಡಿ ನಾಡಿನ ಕಲೆ, ಸಂಸ್ಕೃತಿ, ಪರಂಪರೆಯನ್ನ ಎತ್ತಿಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಇವರ ಸಾಧನೆಯನ್ನ ಕಂಡು ಸರ್ಕಾರವು ಅನೇಕ ಪ್ರಶಸ್ತಿ ನೀಡಿ ಗೌರವಿಸಿದೆ. 1993ರಲ್ಲಿ ತೆಹರಾನ್ ದೇಶದ ಬೊಂಬೆ ಉತ್ಸವ ಪ್ರಶಸ್ತಿ, 63ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಶಸ್ತಿ, ಪ್ರಾದೇಶಿಕ ರಂಗ ಕಲೆಗಳ ಅಧ್ಯಯನ ಪ್ರಶಸ್ತಿ. 2005-06 ನೇ ಸಾಲಿನಲ್ಲಿ ಜಾನಪದ ಮತ್ತು ಬಯಲಾಟ ಅಕಾಡೆಮಿ ಪ್ರಶಸ್ತಿ, 2010 ರಲ್ಲಿ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, 2014ರಲ್ಲಿ ರಾಜ್ಯೋತ್ಸವ ಪ್ರಶಸ್ತಿ, 2020-21ನೇ ಸಾಲಿನ ಜಾನಪದ ಶ್ರೀ ಪ್ರಶಸ್ತಿ, 2022ರಲ್ಲಿ ಹಿರಿಯ ನಾಗರೀಕ ಪ್ರಶಸ್ತಿ ಹೀಗೆ ಸಂಘ ಸಂಸ್ಥೆಗಳಿಂದ ಅನೇಕ ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ.
ಕೊಪ್ಪಳ ಜಿಲ್ಲೆಯ ತೊಗಲುಗೊಂಬೆಯಾಟ ಕಲಾವಿದೆ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ ಅವರು 2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವುದು ಇಡೀ ನಾಡು ಹೆಮ್ಮೆಪಡುವಂತದ್ದು. ಸರಿಸುಮಾರು 7 ದಶಕಗಳ ಕಾಲ ತೊಗಲುಗೊಂಬೆಯಾಟವನ್ನೇ ಬದುಕಿನ ಹಾದಿಯಾಗಿಸಿಕೊಂಡು, ನೆಲದ ಕಲೆಯನ್ನು ದೇಶ – ವಿದೇಶಗಳಿಗೂ ಪರಿಚಯಿಸಿದ ಹಿರಿಯ ಜೀವ ಭೀಮವ್ವನವರು ಈ… pic.twitter.com/vylyre5875
— CM of Karnataka (@CMofKarnataka) January 25, 2025