ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಸಿಡಿಎಸ್ ಬಿಪಿನ್ ರಾವತ್ ಗೆ ಪದ್ಮವಿಭೂಷಣ್ ಪ್ರಶಸ್ತಿ ಪ್ರಕಟಿಸಲಾಗಿದೆ.
ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ಮುನ್ನಾದಿನದಂದು ಘೋಷಿಸಲಾಗುತ್ತದೆ. ಈ ಬಾರಿ ಪದ್ಮ ಪ್ರಶಸ್ತಿಗಳನ್ನು ಘೋಷಿಸಿದ್ದು ಬಿಪಿನ್ ರಾವತ್ಗೆ ಪದ್ಮ ವಿಭೂಷಣ್ ಗೌರವ ನೀಡಲಾಗಿದೆ.
ಕೇಂದ್ರ ಸರ್ಕಾರದಿಂದ ಗಣರಾಜ್ಯೋತ್ಸವ ದಿನಾಚರಣೆಯಂದು ಪ್ರತಿ ವರ್ಷ ನೀಡಲಾಗುವಂತ ಪದ್ಮ ವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳನ್ನು ( Padma Vibhushan, Padma Bhushan and Padma Shri ) ಪ್ರಕಟಿಸಲಾಗಿದೆ. 2022ರ ಸಾಲಿನಲ್ಲಿ ನಾಲ್ವರು ಸಾಧಕರಿಗೆ ಪದ್ಮ ವಿಭೂಷಣ, 17 ಸಾಧಕರಿಗೆ ಪದ್ಮಭೂಷಣ ಹಾಗೂ 107 ವಿವಿಧ ಕ್ಷೇತ್ರದ ಸಾಥಕರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗಿದೆ. ಈ ಪ್ರಶಸ್ತಿಯಲ್ಲಿ ಕರ್ನಾಟಕದ ಐವರಿಗೆ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಸರ್ಕಾರಿ ಶಾಲೆ ಕೊಠಡಿಯಲ್ಲಿ ‘ನಮಾಜ್’ ಮಾಡಿದ ಪ್ರಕರಣ : ಶಾಲಾ ಮುಖ್ಯ ಶಿಕ್ಷಕಿ ಅಮಾನತು