ಮೋದಿ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳನ್ನು ಮುಚ್ಚಿ ಹಾಕಲು ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಪಕ್ಷದಲ್ಲೇ ಭಿನ್ನಾಭಿಪ್ರಾಯವಿದೆ. ಭಾರತೀಯ ಜನತಾ ಪಕ್ಷದವರು ಪಾದಯಾತ್ರೆ ಮಾಡುತ್ತಿಲ್ಲ. ಭಾಗಶಃ ಬಿಜೆಪಿ ಪಕ್ಷದವರು ಪಾದಯಾತ್ರೆ ಮಾಡುತ್ತಿದ್ದಾರೆ. ಯತ್ನಾಳ್ ಅವರು ಇಲ್ಲ, ರಮೇಶ್ ಜಾರಕಿಹೊಳಿ ಅವರು ಇಲ್ಲ, ಬಿಜೆಪಿ – ಜೆಡಿಎಸ್ ಪಕ್ಷಗಳ ಹಿರಿಯ ನಾಯಕರು ಯಾರೂ ಇದರಲ್ಲಿ ಇಲ್ಲ. ಕೇವಲ ವಿಜಯೇಂದ್ರ ಆಂಡ್ ಗ್ಯಾಂಗ್ ಮಾತ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎಂದರು.
ಮೋದಿ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳನ್ನು ಮುಚ್ಚಿ ಹಾಕುವುದಕ್ಕಾಗಿ ಈ ಪಾದಯಾತ್ರೆ ಮಾಡಲಾಗುತ್ತಿದೆ ಕಿಡಿಕಾರಿದ್ದಾರೆ.