ಕೊಲಂಬೊ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿಂದೆ ಶಂಕಿತ ಭಯೋತ್ಪಾದಕರು ಇದ್ದಾರೆ ಎಂದು ಭಾರತದಿಂದ ಮಾಹಿತಿ ಪಡೆದ ನಂತರ ಚೆನ್ನೈನಿಂದ ಬಂದ ವಿಮಾನವನ್ನು ಶ್ರೀಲಂಕಾದ ಕೊಲಂಬೋದ ಬಂಡಾರನಾಯಕೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ಶೋಧ ಕಾರ್ಯಾಚರಣೆಗೆ ಒಳಪಡಿಸಲಾಗಿದೆ.
ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಏಪ್ರಿಲ್.22ರಂದು ಉಗ್ರರು ಅಟ್ಟಹಾಸ ಮೆರೆದಿದ್ದರು. ಉಗ್ರರ ಗುಂಡಿನ ದಾಳಿಯಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದ್ದರು. ಈ ದಾಳಿಗೆ ತಕ್ಕ ಉತ್ತರವಾಗಿ ಭಾರತವು ಸಿಂಧೂ ನದಿ ನೀರು ಒಪ್ಪಂದವನ್ನು ರದ್ದುಗೊಳಿಸಿತ್ತು. ಅಲ್ಲದೇ ಇತರೆ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ.
ಇಂದು ಪಹಲ್ಗಾಮ್ ನಲ್ಲಿ ಅಟ್ಟಹಾಸ ಮೆರೆದಿದ್ದಂತ ಉಗ್ರರು ಚೆನ್ನೈ ವಿಮಾನ ನಿಲ್ದಾಣದ ಮೂಲಕ, ಶ್ರೀಲಂಕಾಗೆ ಪ್ರಯಾಣ ಬೆಳೆಸಿರುವಂತ ಮಾಹಿತಿ ಭಾರತೀಯ ಗುಪ್ತಚರ ಇಲಾಖೆಗೆ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಶ್ರೀಲಂಕಾ ಸರ್ಕಾರಕ್ಕೆ ಮಾಹಿತಿ ನೀಡಿದ್ದು, ಕೊಲಂಬೋ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಬಿಗಿ ತಪಾಸಣೆ ಕ್ರಮವನ್ನು ಕೈಗೊಳ್ಳಲಾಗಿದೆ.
ಭೂಕಬಳಿಕೆದಾರರಿಂದ ಶೀಬಿ ಅರಣ್ಯಭೂಮಿ ರಕ್ಷಣೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ