ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ ( National Investigation Agency – NIA) ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣವನ್ನು ಔಪಚಾರಿಕವಾಗಿ ವಹಿಸಿಕೊಂಡಿದೆ. ಪುರಾವೆಗಳ ಹುಡುಕಾಟವನ್ನು ತೀವ್ರಗೊಳಿಸಿದೆ ಮತ್ತು ಭಯೋತ್ಪಾದಕ ಪಿತೂರಿಯನ್ನು ಬಯಲಿಗೆಳೆಯಲು ಪ್ರತ್ಯಕ್ಷದರ್ಶಿಗಳನ್ನು ಪ್ರಶ್ನಿಸುತ್ತಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವಾಲಯದ (Union Ministry of Home Affairs – MHA) ಆದೇಶದ ಮೇರೆಗೆ ಭಯೋತ್ಪಾದನಾ ವಿರೋಧಿ ಸಂಸ್ಥೆ ಭಾನುವಾರ ಜಮ್ಮುವಿನಲ್ಲಿ ಪ್ರಕರಣ ದಾಖಲಿಸಿದೆ ಮತ್ತು ಹಲವಾರು ತಂಡಗಳು ತನಿಖೆಯಲ್ಲಿ ಭಾಗಿಯಾಗಿವೆ ಎಂದು ಅವರು ಹೇಳಿದರು.
ಏಪ್ರಿಲ್.22ರ ಮಂಗಳವಾರ ಮಧ್ಯಾಹ್ನ 26 ಜನರ ಸಾವಿಗೆ ಕಾರಣವಾದ ಭೀಕರ ಭಯೋತ್ಪಾದಕ ದಾಳಿಯ ನಂತರ, ಸ್ಥಳೀಯ ಪೊಲೀಸರಿಗೆ ಸಹಾಯ ಮಾಡಲು ಎನ್ಐಎ ಇನ್ಸ್ಪೆಕ್ಟರ್ ಜನರಲ್ (ಐಜಿ) ನೇತೃತ್ವದ ಎನ್ಐಎ ಅಧಿಕಾರಿಗಳ ತಂಡವನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
NIA Takes Over Pahalgam Terror Attack Case on MHA’s Orders pic.twitter.com/w5oUOrECa1
— NIA India (@NIA_India) April 27, 2025
ಮನ್ ಕಿ ಬಾತ್: ಭಯೋತ್ಪಾದನೆ ವಿರುದ್ಧ ಪ್ರಧಾನಿ ಮೋದಿಯವರ ಬಲವಾದ ಸಂದೇಶ, ಏಕತೆಗೆ ಒತ್ತು | Mann ki baat