ಬೆಂಗಳೂರು: ಇಂದು ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ 27ಕ್ಕೂ ಹೆಚ್ಚು ಸಾವನ್ನಪ್ಪಿದ್ದಾರೆ. ಕನ್ನಡಿಗ ಶಿವಮೊಗ್ಗ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಎಂಬುವರು ಉಗ್ರರ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಇನ್ನೂ ಹಲವು ಕನ್ನಡಿಗರು ಜಮ್ಮ-ಕಾಶ್ಮೀರದಲ್ಲಿ ಸಿಲುಕಿತ್ತು, ಅವರ ರಕ್ಷಣೆಗಾಗಿ ಐಪಿಎಸ್ ಅಧಿಕಾರಿ ಚೇತನ್.ಆರ್ ನೇತೃತ್ವದ ತಂಡ ತೆರಳುತ್ತಿದೆ.
ಈ ಬಗ್ಗೆ ಎಕ್ಸ್ ನಲ್ಲಿ ಟ್ವಿಟ್ ಮಾಡಿ ಸಿಎಂ ಮಾಹಿತಿ ಹಂಚಿಕೊಂಡಿದ್ದು, ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡು, ತಕ್ಷಣ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದರು.
ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಅಧಿಕಾರಿಗಳ ಒಂದು ತಂಡ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ. ಮುಂದಿನ ಕ್ರಮಗಳ ಉಸ್ತುವಾರಿ ನೋಡಿಕೊಳ್ಳುವಂತೆ ದೆಹಲಿಯ ರೆಸಿಡೆಂಟ್ ಕಮಿಷನರ್ ಅವರಿಗೆ ಸೂಚನೆ ನೀಡಲಾಗಿದೆ.
IPS ಅಧಿಕಾರಿ ಚೇತನ್ ಆರ್ ಮತ್ತು ಸಿಬ್ಬಂದಿ ಹಾಗೂ ಅಧಿಕಾರಿಗಳ ತಂಡ ಕಾಶ್ಮೀರಕ್ಕೆ ತೆರಳಿದೆ ಎಂಬುದಾಗಿ ಮುಖ್ಯಮಂತ್ರಿಗಳ ಕಚೇರಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
BREAKING : ಕನ್ನಡಿಗನ ಮೇಲೆ ಹಲ್ಲೆ ನಡೆಸಿದ ‘ವಿಂಗ್ ಕಮಾಂಡರ್ ‘ವಿರುದ್ಧ ಕಠಿಣ ಕ್ರಮ : CM ಸಿದ್ದರಾಮಯ್ಯ ಆದೇಶ.!
BREAKING: ಪಹಲ್ಗಾಮ್ ನಲ್ಲಿ ಉಗ್ರರ ಅಟ್ಟಹಾಸ: ಭಯೋತ್ಪಾದಕರ ದಾಳಿಗೆ ಮತ್ತೊಬ್ಬ ಕನ್ನಡಿಗ ಬಲಿ