Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಪ್ರತಿಭಟನೆಗಳ ತವರು ‘ಜಂತರ್ ಮಂತರ್’: 18ನೇ ಶತಮಾನದ ಈ ಖಗೋಳ ವೀಕ್ಷಣಾಲಯ ಇಂದಿನ ಆಂದೋಲನಗಳಿಗೆ ಸಾಕ್ಷಿಯಾಗಿದ್ದು ಹೇಗೆ?

ವಾಹನ ಸವಾರರಿಗೆ ಗುಡ್ ನ್ಯೂಸ್ : ಶೇ.50 ರ ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಕಾಶ

ಜಾತ್ರೆಯಲ್ಲಿ ಕೊಂಡ ಬೆಡ್ ಶೀಟ್ ತೊಳೆದಾಗ ಸಿಕ್ತು ‘ಮೇಡ್ ಇನ್ ಪಾಕಿಸ್ತಾನ್’ ಟ್ಯಾಗ್; ಪೊಲೀಸ್ ತನಿಖೆ ಚುರುಕು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪಾಕ್ ಉದ್ವಿಗ್ನತೆ: ಕರ್ನಾಟಕದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ: ಗೃಹ ಸಚಿವ ಪರಮೇಶ್ವರ್
KARNATAKA

ಪಾಕ್ ಉದ್ವಿಗ್ನತೆ: ಕರ್ನಾಟಕದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ: ಗೃಹ ಸಚಿವ ಪರಮೇಶ್ವರ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು : ರಾಜ್ಯದ ಸೂಕ್ಷ್ಮ‌ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ಸುರಕ್ಷತೆ ಕೈಗೊಂಡಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆಗಿಂತ ಹೆಚ್ಚಾಗಿ, ಯುದ್ಧ ಭೀತಿ ಇದೆ. ಗಡಿ ಪ್ರದೇಶದಲ್ಲಿ ಆಗುತ್ತಿರುವ ಚಟುವಟಿಕೆಗಳು, ಉಗ್ರರ ವಿರುದ್ಧ ಸೇನಾ ಪಡೆ ಕ್ರಮ ತೆಗೆದುಕೊಂಡಿದೆ. ಈ ಪರಿಸ್ಥಿತಿ ಹೆಚ್ಚಾದರೆ ಯುದ್ದದ ಪರಿಸ್ಥಿತಿ ಬರಬಹುದು ಎಂಬುದನ್ನು ಕೇಂದ್ರ ಸರ್ಕಾರ ಪ್ರತಿಯೊಂದು ರಾಜ್ಯ ಸರ್ಕಾರಗಳಿಗೆ ಕೆಲವು ಸೂಚನೆಗಳನ್ನು ನೀಡಿದೆ. ಅದರ ಹಿನ್ನೆಲೆಯಲ್ಲಿ ಈಗಾಗಲೇ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು‌.

ರಾಜ್ಯದಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ಸುರಕ್ಷಿತೆ ಕೈಗೊಂಡಿದ್ದೇವೆ. ಪ್ರತಿಯೊಂದು ನಗರ, ಪಟ್ಟಣದಲ್ಲಿ ಜಾಗೃತಿ ವಹಿಸಿದ್ದೇವೆ. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದರು.

ಈ ಕುರಿತಂತೆ ಮುಖ್ಯಮಂತ್ರಿಯವರು ಇಂದು ಸಂಜೆ ೪ ಗಂಟೆಗೆ ಸಭೆ ಕರೆದಿದ್ದಾರೆ. ಅಂತಹ ಸನ್ನಿವೇಶ ಬಂದರೆ ನೀರು, ಆಹಾರ ಧಾನ್ಯ , ಆಸ್ಪತ್ರೆ ಸೇರಿ ಎಲ್ಲ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದೇವೆ. ಗೃಹ ಇಲಾಖೆ, ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸುತ್ತೇವೆ.‌ ನಿನ್ನೆಯಿಂದ ಈಚೆಗೆ ಕೇಂದ್ರ ಸರ್ಕಾರದಿಂದ ಯಾವುದಾದರೂ ಸೂಚನೆಗಳು ಬಂದಿದ್ದರೆ, ಅದರ ಬಗ್ಗೆಯೂ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.

ಬೇರೆ ರಾಜ್ಯಗಳಲ್ಲಿ ನಾಗರಿಕರಿಗೆ ಕೆಲವು ಮಾರ್ಗಸೂಚಿಗಳನ್ನು ಕೊಟ್ಟಿದ್ದಾರೆ. ನಾವು ಅಂತಹ ಸನ್ನಿವೇಶದಲ್ಲಿದ್ದೇವೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಸನ್ನಿವೇಶ ಎದುರಾಗುವ ಮುನ್ನ ಅಗತ್ಯ ತಯಾರಿ ಮಾಡಿಕೊಂಡಿದ್ದೇವೆ. ಆಹಾರ ಧಾನ್ಯ, ನೀರು, ಆಸ್ಪತ್ರೆ ತಯಾರಿ ಮಾಡಿಕೊಂಡಿದ್ದೇವೆ. ಅಂತಹ ಘಟನೆಗಳು ನಡೆದರೆ ಎದುರಿಸಲು ನಾವು ಸಿದ್ಧವಾಗಿರಬೇಕು ಎಂಬುದನ್ನು ಹೊರತುಪಡಿಸಿದರೆ, ಅಂತಹ ಸನ್ನಿವೇಶ ಇಲ್ಲ ಎಂದು ಸ್ಪಷ್ಟಪಡಿಸಿದರು.

ಪೊಲೀಸರಿಗೆ ರಜೆ ಕೊಡುವುದಿಲ್ಲ. ಸೂಕ್ಷ್ಮ‌ ಸನ್ನಿವೇಶ ಇರುವುದರಿಂದ ಪೊಲೀಸರಿಗೆ ರಜೆ ಮಂಜೂರು ಮಾಡುವುದಕ್ಕೆ ಹೋಗುವುದಿಲ್ಲ. ಸದ್ಯಕ್ಕೆ ಯಾವುದೇ ರಜೆ ಇಲ್ಲ. ಪರಿಸ್ಥಿತಿ ಸಾಮಾನ್ಯಕ್ಕೆ ಬಂದಿರುವುದನ್ನು ಕೇಂದ್ರ ಸರ್ಕಾರ ನಮಗೆ ತಿಳಿಸುತ್ತದೆ. ಅಲ್ಲಿಯವರೆಗೂ ನಾವು ಸೂಕ್ಷ್ಮವಾಗಿರಬೇಕು‌ ಎಂದರು.

ಕರಾವಳಿಯಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಾಗುತ್ತದೆ. ಕರಾವಳಿಯಲ್ಲಿ ಬಿಗಿ ಭದ್ರತೆ ‌ವಹಿಸಿದ್ದೇವೆ. ಮಂಗಳೂರು, ಉತ್ತರ ಕನ್ನಡದಲ್ಲಿ ನಿಗಾ ವಹಿಸಲಾಗಿದೆ. ಪೊಲೀಸ್ ಇಲಾಖೆ ಎಲ್ಲಾ ಕ್ರಮ ವಹಿಸಿದೆ. ನೇವಿ ಅವರು ಕೂಡ ಭದ್ರತೆ ವಹಿಸಿದ್ದಾರೆ. ನಮ್ಮ ಬಾರ್ಡರ್ ಒಳಗೆ ಸೆಕ್ಯೂರಿಟಿ ಇದೆ. ಆ ಮಾಹಿತಿ ನಮಗೆ ಬಂದಿಲ್ಲ. ಕೇಂದ್ರದವರು ಏನಾದರೂ ಇದ್ದರೆ ಹೇಳುತ್ತಾರೆ ಎಂದರು.

ಫೇಕ್‌ನ್ಯೂಸ್ ತಡೆಗಟ್ಟಲು ಕ್ರಮ

ರಾಜ್ಯದಲ್ಲಿ ಫೇಕ್ ನ್ಯೂಸ್ ಹೆಚ್ಚಾಗಿ ಹರಡುತ್ತಿರುವ ಕುರಿತಂತೆ ಐಎಸ್‌ಡಿಯೊಂದಿಗೆ ಮಧ್ಯಾಹ್ನ ಸಭೆ ಕರೆದಿದ್ದೇನೆ. ಐಟಿ ಇಲಾಖೆಯ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಭಾಗವಹಿಸುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಫೇಕ್ ನ್ಯೂಸ್ ಹೆಚ್ಚಾಗಿ ಹರಿಹಾಡುತ್ತಿವೆ. ಹಳೇ ವೀಡಿಯೋಗಳನ್ನು ತೆಗೆದು ಪೋಸ್ಟ್ ಮಾಡಲಾಗುತ್ತಿದೆ. ಪ್ರಚೋದನಾಕಾರಿ ವಿಷಯಗಳನ್ನು ಪೋಸ್ಟ್ ಮಾಡಲಾಗುತ್ತಿದೆ. ಸುಳ್ಳು ಮಾಹಿತಿ ಹಂಚಿಕೊಳ್ಳುತ್ತಿದ್ದಾರೆ. ಈ ಬಗ್ಗೆ ತಾಂತ್ರಿಕವಾಗಿ ಏನು ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಚರ್ಚಿಸಲಾಗುವುದು ಎಂದು ತಿಳಿಸಿದರು‌.

Share. Facebook Twitter LinkedIn WhatsApp Email

Related Posts

ವಾಹನ ಸವಾರರಿಗೆ ಗುಡ್ ನ್ಯೂಸ್ : ಶೇ.50 ರ ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಕಾಶ

1 Min Read

Income Tax Saving Tips : ಲಕ್ಷಗಟ್ಟಲೆ ಸಂಪಾದಿಸಿದರೂ ಶೂನ್ಯ ತೆರಿಗೆ : ಇವರಿಗೆ ಒಂದೂ ರೂಪಾಯಿ ತೆರಿಗೆ ಇರಲ್ಲ.!

3 Mins Read

BIG NEWS : ರಾಜ್ಯದ ಕಂದಾಯ ಇಲಾಖೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ ಪ್ರಕ್ರಿಯೆಗೆ ಸರ್ಕಾರ ಮಹತ್ವದ ಆದೇಶ

1 Min Read
Recent News

​ಪ್ರತಿಭಟನೆಗಳ ತವರು ‘ಜಂತರ್ ಮಂತರ್’: 18ನೇ ಶತಮಾನದ ಈ ಖಗೋಳ ವೀಕ್ಷಣಾಲಯ ಇಂದಿನ ಆಂದೋಲನಗಳಿಗೆ ಸಾಕ್ಷಿಯಾಗಿದ್ದು ಹೇಗೆ?

ವಾಹನ ಸವಾರರಿಗೆ ಗುಡ್ ನ್ಯೂಸ್ : ಶೇ.50 ರ ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಕಾಶ

ಜಾತ್ರೆಯಲ್ಲಿ ಕೊಂಡ ಬೆಡ್ ಶೀಟ್ ತೊಳೆದಾಗ ಸಿಕ್ತು ‘ಮೇಡ್ ಇನ್ ಪಾಕಿಸ್ತಾನ್’ ಟ್ಯಾಗ್; ಪೊಲೀಸ್ ತನಿಖೆ ಚುರುಕು!

​ಹಿಮಾಚಲ ಪ್ರದೇಶದಲ್ಲಿ ಭೂಕಂಪದ ಆಘಾತ: ಕಂಗ್ರಾ-ಚಂಬಾ ಭಾಗದಲ್ಲಿ ನಡುಗಿದ ಭೂಮಿ, ಚಂಡೀಗಢ ಮತ್ತು ಪಂಜಾಬ್‌ನಲ್ಲೂ ಕಂಪನ

State News
KARNATAKA

ವಾಹನ ಸವಾರರಿಗೆ ಗುಡ್ ನ್ಯೂಸ್ : ಶೇ.50 ರ ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಕಾಶ

By kannadanewsnow57 KARNATAKA 1 Min Read

ಬೆಂಗಳೂರು: ನಿಮ್ಮ ವಾಹನದ ಮೇಲೆ ಹಳೇ ಟ್ರಾಫಿಕ್ ಫೈನ್ ಬಾಕಿ ಉಳಿದಿದೆಯೇ? ಹಾಗಿದ್ದರೆ ನಿಮಗೊಂದು ಸಿಹಿ ಸುದ್ದಿ! ನಿಯಮ ಉಲ್ಲಂಘನೆ…

Income Tax Saving Tips : ಲಕ್ಷಗಟ್ಟಲೆ ಸಂಪಾದಿಸಿದರೂ ಶೂನ್ಯ ತೆರಿಗೆ : ಇವರಿಗೆ ಒಂದೂ ರೂಪಾಯಿ ತೆರಿಗೆ ಇರಲ್ಲ.!

BIG NEWS : ರಾಜ್ಯದ ಕಂದಾಯ ಇಲಾಖೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ ಪ್ರಕ್ರಿಯೆಗೆ ಸರ್ಕಾರ ಮಹತ್ವದ ಆದೇಶ

JOB ALERT : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 3,395 ಸಿವಿಲ್ `ಕಾನ್ಸ್ ಟೇಬಲ್’ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | Police Recruitment

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.