ಬಲೂಚಿಸ್ತಾನ (ಪಾಕಿಸ್ತಾನ): ನೈಋತ್ಯ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಪ್ರಯಾಣಿಕರಿದ್ದ ಬಸ್ ಕಂದರಕ್ಕೆ ಉರುಳಿದ ಪರಿಣಾಮ ಸುಮಾರು 19 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, 12 ಜನ ಗಾಯಗೊಂಡಿರುವ ಘಟನೆ ನಡೆದಿದೆ.

ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಗಡಿಯುದ್ದಕ್ಕೂ ಜಿಲ್ಲೆಯ ದಾನಾ ಸಾರ್ ಪ್ರದೇಶದ ಬಳಿ ಮಳೆಯ ನಡುವೆ ಬಸ್‌ ಅತಿ ವೇಗವಾಗಿ ಚಲಿಸಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ್ದು, ಬಸ್ ಆಳವಾದ ಕಂದಕಕ್ಕೆ ಬಿದ್ದು ಹಲವು ಬಾರಿ ಪಲ್ಟಿಯಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೇಶದ ರಾಜಧಾನಿ ಇಸ್ಲಾಮಾಬಾದ್‌ನಿಂದ ಬಲೂಚಿಸ್ತಾನದ ಪ್ರಾಂತೀಯ ರಾಜಧಾನಿ ಕ್ವೆಟ್ಟಾಗೆ ತೆರಳುತ್ತಿದ್ದ ಈ ಬಸ್‌ನಲ್ಲಿ 30 ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದೆ.

Good News : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ : `CET-NEET’ ವಿದ್ಯಾಭ್ಯಾಸ ಸಾಲಕ್ಕಾಗಿ ಅರ್ಜಿ ಆಹ್ವಾನ

ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಬ್ಯಾಗ್‌ನಲ್ಲಿ ʻಬಾಂಬ್‌ʼ ಇದೆ ಎಂದ ದಂಪತಿ!… ಮುಂದೇನಾಯ್ತು?

 

Share.
Exit mobile version