ನವದೆಹಲಿ: ಬಲೂಚಿಸ್ತಾನದಲ್ಲಿ 21 ಪ್ರಯಾಣಿಕರು ಮತ್ತು ನಾಲ್ವರು ಅರೆಸೈನಿಕ ಸೈನಿಕರನ್ನು ಬಲಿತೆಗೆದುಕೊಂಡ ಜಾಫರ್ ಎಕ್ಸ್ಪ್ರೆಸ್ ಅಪಹರಣದ ಹಿಂದೆ ಭಾರತದ ಕೈವಾಡವಿದೆ ಎಂದು ಪಾಕಿಸ್ತಾನದ ವಿದೇಶಾಂಗ ಕಚೇರಿ ಗುರುವಾರ ಆರೋಪಿಸಿದೆ.
ಹೈಜಾಕ್ ಹಿಂದೆ ಬಲೂಚ್ ಭಯೋತ್ಪಾದಕರು ಅಫ್ಘಾನಿಸ್ತಾನದಲ್ಲಿರುವ ತಮ್ಮ ಸಹಚರರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಗುಪ್ತಚರ ವರದಿಗಳು ಸೂಚಿಸಿವೆ ಎಂದು ವಿದೇಶಾಂಗ ಕಚೇರಿ ವಕ್ತಾರ ಶಫ್ಕತ್ ಅಲಿ ಖಾನ್ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದಾರೆ ಎಂದು ದಿ ಟ್ರಿಬ್ಯೂನ್ ವರದಿ ಮಾಡಿದೆ.
ಜಾಫರ್ ಎಕ್ಸ್ ಪ್ರೆಸ್ ದಾಳಿಯ ನಂತರದ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಅವರು ಹೇಳಿದರು.
ಪಾಕಿಸ್ತಾನ ಸೇನಾ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಶರೀಫ್ ಮಾತನಾಡಿ, ಭದ್ರತಾ ಪಡೆಗಳು ಘಟನಾ ಸ್ಥಳದಲ್ಲಿದ್ದ ಎಲ್ಲಾ 33 ಉಗ್ರರನ್ನು ಕೊಂದಿವೆ. ಮಂಗಳವಾರ ಭಯೋತ್ಪಾದಕರು ರೈಲಿನ ಮೇಲೆ ದಾಳಿ ನಡೆಸಿದಾಗ 21 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಹೇಳಿದರು.
ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ಟನಲ್ ರಸ್ತೆ, ಡಬಲ್ ಡೆಕ್ಕರ್, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್ ಯೋಜನೆ: DKS
ತುಂಗಭದ್ರ ಆಣೆಕಟ್ಟಿನಲ್ಲಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರಿನ ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ: DKS