ಮಾಸ್ಕೋ: ಪಹಲ್ಗಾಮ್ ಉಗ್ರರ ದಾಳಿಯ ನಂತ್ರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಇದರ ನಡುವೆ ಭಾರತದ ಮೇಲೆ ಅಣ್ವಸ್ತ್ರ ದಾಳಿ ನಡೆಸುವುದಾಗಿ ಪಾಕಿಸ್ತಾನ ಬೆದರಿಕೆ ಹಾಕಿದೆ.
ಈ ಕುರಿತಂತೆ ರಷ್ಯಾದ ನ್ಯೂಸ್ ಏಜೆನ್ಸಿಯ ಜೊತೆಗೆ ಮಾತನಾಡಿರುವಂತ ಪಾಕ್ ರಾಯಭಾರಿ ಮುಹಮ್ಮದ್ ಖಾಲಿ ಜಮಾಲಿ ಅವರು, ಭಾರತದ ಮೇಲೆ ಅಣ್ವಸ್ತ್ರ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಕಳೆದ ಏಪ್ರಿಲ್.22, 2025ರಂದು ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಉಗ್ರರು ಅಟ್ಟ ಹಾಸ ಮೆರೆದಿದ್ದರು. ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿ 26 ಮಂದಿಯನ್ನು ಕೊಂದಿದ್ದರು. ಈ ಬಳಿಕ ಭಾರತ ಸಿಂಧೂ ನದಿ ಒಪ್ಪಂದ ರದ್ದುಪಡಿಸಿತ್ತು. ಪಾಕಿಸ್ತಾನಿ ಪ್ರಜೆಗಳಿಗೆ ನೀಡಿದ್ದಂತ ವಿಸಾ ರದ್ದುಗೊಳಿಸಿತ್ತು.
ಇದರ ನಡುವೆ ಪಾಕ್ ರಾಯಭಾರಿ ಮುಹಮ್ಮದ್ ಖಾಲಿ ಜಮಾಲಿ ಅವರು ಭಾರತದಿಂದ ಎದುರಾಗುವ ಯಾವುದೇ ರೀತಿಯ ಆಕ್ರಮಣಕ್ಕೆ ತಕ್ಕ ರೀತಿಯಲ್ಲಿ ಉತ್ತರಿಸಲು ಪಾಕಿಸ್ತಾನ ಸಿದ್ದಧವಾಗಿದೆ. ಪಾಕ್ ತನ್ನೆಲ್ಲ ಬಲವನ್ನು ಪ್ರಯೋಗ ಮಾಡಲಿದೆ. ಸಾಂಪ್ರದಾಯಿಕ ಹಾಗೂ ಅಣ್ವಸ್ತ್ರ ಎರಡೂ ರೀತಿಯ ಯುದ್ಧಕ್ಕೂ ಸಜ್ಜಾಗಿದೆ ಎಂಬುದಾಗಿ ಬೆದರಿಕೆ ಹಾಕಿದ್ದಾರೆ.
ಅಂತರರಾಷ್ಟ್ರೀಯ ವಿಮಾನಯಾನ ಸಂಸ್ಥೆಗಳಿಂದ ಪಾಕಿಸ್ತಾನ ವಾಯುಪ್ರದೇಶ ಬಳಕೆ ಸ್ಥಗಿತ
BREAKING: ಭಾರತ-ಪಾಕ್ ಉದ್ವಿಗ್ನತೆಯ ನಡುವೆ 2ನೇ ಬಾರಿಗೆ ಫತಾಹ್ ಕ್ಷಿಪಣಿ ಪರೀಕ್ಷೆ ನಡೆಸಿದ ಪಾಕಿಸ್ತಾನ!