ನವದೆಹಲಿ: ಪಾಕಿಸ್ತಾನ ಸೇನೆಯು ನಿನ್ನೆ ರಾತ್ರಿ ನಿಯಂತ್ರಣ ರೇಖೆಯ (Line of Control -LoC) ಆಚೆ ಇರುವ ಭಾರತೀಯ ಸೇನಾ ನೆಲೆಗಳ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಭಾರತೀಯ ಪಡೆಗಳು ಪರಿಣಾಮಕಾರಿಯಾಗಿ ಪ್ರತಿದಾಳಿ ನಡೆಸಿವೆ ಎಂದು ಭಾರತೀಯ ಸೇನೆ ತಿಳಿಸಿದೆ. ಅಲ್ಲದೇ ಪಾಕಿಸ್ತಾನ ಮೂರು ದಿನಗಳಲ್ಲಿ 40 ಬಾರಿ ಕದನ ವಿರಾಮವನ್ನು ಪಾಕಿಸ್ತಾನ ಉಲ್ಲಂಘಿಸಿದೆ.
ಪಾಕಿಸ್ತಾನವು ಎಲ್‌ಒಸಿ ಉದ್ದಕ್ಕೂ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವುದು ಇದು ಸತತ ಮೂರನೇ ರಾತ್ರಿಯಾಗಿದೆ. ಮಂಗಳವಾರದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚಿದ ಉದ್ವಿಗ್ನತೆಯ ಮಧ್ಯೆ ಸತತ ಮೂರನೇ ರಾತ್ರಿಯೂ ಗುಂಡಿನ ಚಕಮಕಿ ನಡೆದಿದೆ.
ಕಳೆದ ಮೂರು ದಿನಗಳಲ್ಲಿ ಪಾಕಿಸ್ತಾನಿ ಪಡೆಗಳು 40 ಬಾರಿ ಕದನ ವಿರಾಮವನ್ನು ಉಲ್ಲಂಘಿಸಿವೆ. ಪಾಕಿಸ್ತಾನಿ ಪಡೆಗಳು ಏಪ್ರಿಲ್ 24-25 ರ ಮಧ್ಯರಾತ್ರಿ ಎಲ್‌ಒಸಿ ಉದ್ದಕ್ಕೂ ಮೊದಲು ಕದನ ವಿರಾಮವನ್ನು ಉಲ್ಲಂಘಿಸಿವೆ. ಗುರುವಾರ ರಾತ್ರಿ, ಪಾಕಿಸ್ತಾನಿ ಪಡೆಗಳು ಸುಮಾರು 19 ಸ್ಥಳಗಳಲ್ಲಿ ಕದನ ವಿರಾಮವನ್ನು ಉಲ್ಲಂಘಿಸಿವೆ. ಮರುದಿನ ರಾತ್ರಿ, 15 ಸ್ಥಳಗಳಲ್ಲಿ ಕದನ ವಿರಾಮವನ್ನು ಉಲ್ಲಂಘಿಸಲಾಗಿದೆ.
2025 ರ ಏಪ್ರಿಲ್ 26-27 ರ ರಾತ್ರಿ, ಪಾಕಿಸ್ತಾನ ಸೇನಾ ನೆಲೆಗಳು ತುತ್ಮರಿ ಗಾಲಿ ಮತ್ತು ರಾಂಪುರ ಸೆಕ್ಟರ್‌ಗಳ ಎದುರಿನ ಪ್ರದೇಶಗಳಲ್ಲಿ ನಿಯಂತ್ರಣ ರೇಖೆಯುದ್ದಕ್ಕೂ ಸಣ್ಣ ಶಸ್ತ್ರಾಸ್ತ್ರಗಳಿಂದ ಗುಂಡಿನ ದಾಳಿ ನಡೆಸಿದವು. ನಮ್ಮ ಪಡೆಗಳು ಸೂಕ್ತವಾದ ಪ್ರತ್ಯುತ್ತರದ ದಾಳಿ ನಡೆಸಿರುವುದಾಗಿ ಭಾರತೀಯ ಸೇನೆ ತಿಳಿಸಿದೆ.
ಗುಂಡಿನ ದಾಳಿಯಲ್ಲಿ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಪಹಲ್ಗಾಮ್ ದಾಳಿಗೆ ಗಡಿಯಾಚೆಗಿನ ಸಂಪರ್ಕಗಳನ್ನು ಗಮನದಲ್ಲಿಟ್ಟುಕೊಂಡು, ಭಾರತ ಬುಧವಾರ 65 ವರ್ಷಗಳಷ್ಟು ಹಳೆಯದಾದ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವುದು. ಅಟ್ಟಾರಿ ಭೂ-ಗಡಿ ದಾಟುವಿಕೆಯನ್ನು ಮುಚ್ಚುವುದು ಮತ್ತು ಪಾಕಿಸ್ತಾನಿ ಮಿಲಿಟರಿ ಅಟ್ಯಾಚ್‌ಗಳನ್ನು ಹೊರಹಾಕುವುದು ಸೇರಿದಂತೆ ದಂಡನಾತ್ಮಕ ಕ್ರಮಗಳನ್ನು ಘೋಷಿಸಿತು.
ಅಟ್ಟಾರಿ ಭೂ ಗಡಿಯ ಮೂಲಕ ದೇಶವನ್ನು ಪ್ರವೇಶಿಸಿದ ಎಲ್ಲಾ ಪಾಕಿಸ್ತಾನಿಗಳನ್ನು ಮೇ 1 ರೊಳಗೆ ಹೊರಹೋಗುವಂತೆ ಕೇಳಿಕೊಂಡಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಪಾಕಿಸ್ತಾನ ಗುರುವಾರ ಎಲ್ಲಾ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ತನ್ನ ವಾಯುಪ್ರದೇಶವನ್ನು ಮುಚ್ಚುವುದಾಗಿ ಘೋಷಿಸಿತು. ಮೂರನೇ ದೇಶಗಳ ಮೂಲಕ ಸೇರಿದಂತೆ ನವದೆಹಲಿಯೊಂದಿಗೆ ವ್ಯಾಪಾರವನ್ನು ಸ್ಥಗಿತಗೊಳಿಸಿತು.
ಪಾಕ್ ವಿರುದ್ದ ಪ್ರತಿಭಟಿಸಿದವರ ವಿರುದ್ದ ಕ್ರಮ ಕೈಗೊಳ್ಳುವುದು ಯಾವ ನ್ಯಾಯ?: ರಾಜಕುಮಾರ ಪಾಟೀಲ್ ತೇಲ್ಕೂರ ಪ್ರಶ್ನೆ
ಮನ್ ಕಿ ಬಾತ್: ಭಯೋತ್ಪಾದನೆ ವಿರುದ್ಧ ಪ್ರಧಾನಿ ಮೋದಿಯವರ ಬಲವಾದ ಸಂದೇಶ, ಏಕತೆಗೆ ಒತ್ತು | Mann ki baat