ಬೆಂಗಳೂರು: ವಿಧಾನಸೌಧದಲ್ಲಿ ರಾಜ್ಯಸಭಾ ಚುನಾವಣೆ ಸಂದರ್ಭದ ಬಳಿಕ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣದಲ್ಲಿ ರಾಜ್ಯಸಭಾ ಸದಸ್ಯರಾಗಿ ಕಾಂಗ್ರೆಸ್‍ನಿಂದ ಆಯ್ಕೆಯಾದ ನಾಸೀರ್ ಹುಸೇನ್ ಮತ್ತು ಬೆಂಬಲಿಗರ ವಿರುದ್ಧ ಬಿಜೆಪಿ ನಿಯೋಗವು ಪೊಲೀಸರಿಗೆ ದೂರು ನೀಡಿದೆ.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು, ರಾಜ್ಯ ಎಸ್‍ಸಿ ಮೋರ್ಚಾದ ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿ ಚಿ.ನಾ.ರಾಮು ಮತ್ತಿತರ ಮುಖಂಡರ ನಿಯೋಗವು ಈ ಮನವಿ ಸಲ್ಲಿಸಿತು.
ನಾಸೀರ್ ಹುಸೇನ್ ಮತ್ತು ಅವರ ಬೆಂಬಲಿಗರ ವಿರುದ್ಧ ಕೇಸು ದಾಖಲಿಸಲು ಈ ಹಿಂದೆ ಬಿಜೆಪಿ ಎಂಎಲ್‍ಸಿ ಎನ್.ರವಿಕುಮಾರ್ ಅವರು ಈ ಹಿಂದೆ ಫೆಬ್ರವರಿ 27ರಂದು ನೀಡಿದ್ದ ದೂರಿನ ಕುರಿತು ಈ ದೂರಿನಲ್ಲಿ ಗಮನ ಸೆಳೆಯಲಾಗಿದೆ. ಈ ಪ್ರಕರಣದಲ್ಲಿ ನಾಸೀರ್ ಹುಸೇನ್ ಅವರನ್ನು ಮೊದಲ ಆರೋಪಿ ಎಂದು ಪರಿಗಣಿಸಬೇಕಿತ್ತು ಎಂದು ಗಮನ ಸೆಳೆಯಲಾಗಿದೆ.
Watch Video: ‘ಬರಗಾಲ’ದಲ್ಲೂ ಖುಲಾಯಿಸಿದ ‘ರೈತ’ನ ಅದೃಷ್ಠ: ‘ಬೇಸಿಗೆ’ಯಲ್ಲೂ ಬೋರಲ್ಲಿ 45 ಅಡಿಗೆ ‘2.5 ಇಂಚು’ ನೀರು