ನವದೆಹಲಿ: ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯ ನಂತ್ರ ಭಾರತ ತೊರೆಯೋದಕ್ಕೆ ಇಂದಿನವರೆಗೆ ಡೆಡ್ ಲೈನ್ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಅಟ್ಟಾರಿ-ವಾಘಾ ಗಡಿಯಲ್ಲಿ ಭಾರತದಿಂದ ಪಾಕಿಸ್ತಾನಕ್ಕೆ ತೆರಳಲು ಪಾಕಿಸ್ತಾನಿ ಪ್ರಜೆಗಳು ಸಾಲುಗಟ್ಟಿ ನಿಂತಿದ್ದಾರೆ.
ಭಾರತದ ವಿವಿಧ ರಾಜ್ಯಗಳಲ್ಲಿ ನೆಲೆಸಿದ್ದಂತ ಪಾಕಿಸ್ತಾನಿ ಪ್ರಜೆಗಳು ಪಾಕಿಸ್ತಾನಕ್ಕೆ ವಾಪಾಸ್ ಆಗುತ್ತಿದ್ದಾರೆ. ಭಾರತದ ಅಮೃತಸರ ಬಳಿಯ ಅಟ್ಟಾರಿ-ವಾಘಾ ಗಡಿ ದಾಟುವಿಕೆಯಲ್ಲಿ ಲಗೇಜ್ ಹೊಂದಿರುವ ಮಹಿಳೆ ಇಂಟಿಗ್ರೇಟೆಡ್ ಚೆಕ್ ಪೋಸ್ಟ್ ನಲ್ಲಿ ತಪಾಸಣೆಗೆ ಒಳಗಾಗಿ ತೆರಳಿದರು.
ಪಾಕಿಸ್ತಾನಿ ನಾಗರಿಕರಿಗೆ ನೀಡಲಾದ ವೀಸಾಗಳನ್ನು ಭಾರತ ರದ್ದುಪಡಿಸಿದ ನಂತರ ಭಾರತವನ್ನು ತೊರೆಯಲು ತಯಾರಿ ನಡೆಸುತ್ತಿರುವ ಪಾಕಿಸ್ತಾನಿ ನಾಗರಿಕರ ಪಾಸ್ಪೋರ್ಟ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ಯ ಮಿಲಿಟರಿ ಸಿಬ್ಬಂದಿ ಭಾರತದ ಅಮೃತಸರ ಬಳಿಯ ಅಟ್ಟಾರಿ-ವಾಘಾ ಗಡಿ ದಾಟುವಿಕೆಯಲ್ಲಿ ಪರಿಶೀಲಿಸಿ ಕಳುಹಿಸುತ್ತಿದ್ದಾರೆ.
ಕಾರು, ರಿಕ್ಷಾ ಸೇರಿದಂತೆ ವಿವಿಧ ವಾಹನಗಳ ಮೂಲಕ ಭಾರತದಿಂದ ಅಟ್ಟಾರಿ-ವಾಘಾ ಗಡಿಯ ಮೂಲಕ ಪಾಕಿಸ್ತಾನಕ್ಕೆ ಪಾಕಿಸ್ತಾನಿ ಪ್ರಜೆಗಳು ವಾಪಾಸ್ ಆಗುತ್ತಿದ್ದಾರೆ.
ಪಂಜಾಬಿನ ಅಮೃತಸರದ ಬಳಿಯ ಅಟಾರಿ-ವಾಘಾ ಗಡಿಯಲ್ಲಿ ಪಾಕಿಸ್ತಾನ ಪ್ರಜೆಗಳು ಪಾಕಿಸ್ತಾನಕ್ಕೆ ವಾಪಾಸ್ ಆಗೋದಕ್ಕೆ ಸಾಲುಗಟ್ಟಿ ನಿಂತಿದ್ದಾರೆ. 237 ಪಾಕಿಸ್ತಾನಿ ಪ್ರಜೆಗಳು ಅಟಾರಿ-ವಾಘಾ ಗಡಿಯ ಮೂಲಕ ಪಾಕಿಸ್ತಾನಕ್ಕೆ ವಾಪಾಸ್ಸಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಮನ್ ಕಿ ಬಾತ್: ಭಯೋತ್ಪಾದನೆ ವಿರುದ್ಧ ಪ್ರಧಾನಿ ಮೋದಿಯವರ ಬಲವಾದ ಸಂದೇಶ, ಏಕತೆಗೆ ಒತ್ತು | Mann ki baat