ಬೆಳಗಾವಿ: ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಸರ್ಕಾರ ವಿಳಂಬ ನೀತಿ ತೋರಿಸುವುದನ್ನು ಖಂಡಿಸಿ, ಡಿಸೆಂಬರ್ 12 ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಪಂಚಮಸಾಲಿ ಸಮುದಾಯದ ಕೂಡಲಸಂಗಮ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ಹುಕ್ಕೇರಿಯಲ್ಲಿ ಹಮ್ಮಿಕೊಂಡ ಪಂಚಮಸಾಲಿ ಲಿಂಗಾಯತ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಸಮಾಜದ 2ಎ ಮೀಸಲಾತಿ ಹೋರಾಟ ಕೆಲವೇ ದಿನಗಳಲ್ಲಿ ತಾರ್ಕಿಕ ಅಂತ್ಯ ಕಾಣಲಿದೆ. ಸರ್ಕಾರದ ವಿಳಂಬ ನೀತಿ ಖಂಡಿಸಿ ಪಂಚಮಸಾಲಿ ಸಮುದಾಯದಿಂದ ಸಮಾವೇಶ ನಡೆಸಲಾಗುತ್ತಿದೆ. ಶೇ 82ರಷ್ಟು ಬಹುಸಂಖ್ಯಾತ ಪಂಚಮಸಾಲಿ ಸಮಾಜದವರು ಅಧಿಕಾರದಿಂದ ವಂಚಿತರಾಗಿದ್ದಾರೆ. ಪಂಚಮಸಾಲಿ ಹೃದಯವಂತ ಸಮಾಜ, ನಾನು ಪೀಠಾಧ್ಯಕ್ಷನಾದ ಬಳಿಕ ಎಂದೆಂದಿಗೂ ಯಾರೂ ಏನನ್ನೂ ಕೇಳಿಲ್ಲ. ಮೀಸಲಾತಿ ಸಿಗೋವರೆಗೂ ಏನೂ ಬೇಡ, ಹೋರಾಟಕ್ಕೆ ಬನ್ನಿ ಎಂದು ಕರೆ ಕೊಟ್ಟಿದ್ದೇನೆ ಎಂದರು.