ಬೆಳಗಾವಿ ಸುವರ್ಣಸೌಧ: ವಿಪಕ್ಷ ಬಿಜೆಪಿಗೆ ಭಾರೀ ಮುಖಭಂಗ ಎನ್ನುವಂತೆ ವಿಧಾನ ಪರಿಷತ್ತಿನಲ್ಲಿಯೂ ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕವು ಧ್ವನಿ ಮತದ ಮೂಲಕ ಅಂಗೀಕಾರ ದೊರೆಯಿತು.
ನಿನ್ನೆಯಷ್ಟೇ ವಿಧಾನಸಭೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾಲಯ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯ ಮುಂದೆ ಪರ್ಯಾಲೋಚನೆ ಹಾಗೂ ಅಂಗೀಕಾರಕ್ಕೆ ಮಂಡಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯಕ್ಕೆ ದಕ್ಷ ಆಡಳಿತ ನೀಡುವ ದೃಷ್ಠಿಯಿಂದ ತಿದ್ದುಪಡಿ ವಿಧೇಯಕ ಮಂಡಿಸಲಾಗಿದ್ದು, ವಿಧೇಯಕದ 2(ಆರ್-ಎ),13,15(2),26 ಹಾಗೂ 33ರ ಪ್ರಕರಣಗಳಿಗೆ ತಿದ್ದುಪಡಿ ತರಲಾಗಿದೆ. 2ನೇ ಪ್ರಕರಣದ ಆರ್-ಎ ಖಂಡದಲ್ಲಿ ರಾಜ್ಯ ಸರ್ಕಾರ ಎಂದರೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಭಾರೆಯಲ್ಲಿರುವ ಮಂತ್ರಿ ಎಂದು ತಿದ್ದುಪಡಿ ಮಾಡಲಾಗಿದೆ.
13ನೇ ಪ್ರಕರಣದಲ್ಲಿ ರಾಜ್ಯಪಾಲರು ಎಂಬ ಪದ ಬದಲಾಗಿ ಮುಖ್ಯಮಂತ್ರಿಯವರು ಎಂದು ಪ್ರತಿಯೋಜಿಸಿ, ಮುಖ್ಯಮಂತ್ರಿಗಳನ್ನು ವಿಶ್ವ ವಿದ್ಯಾಲಯದ ಕುಲಪತಿಗಳನ್ನಾಗಿಸಿದೆ.
15(2)ನೇ ಪ್ರಕರಣದಲ್ಲಿ ವೈಜ್ಞಾನಿಕ ಅವಿಷ್ಕಾರ ಹಾಗೂ ಉದ್ಯೋಗ ಅವಕಾಶಗಳನ್ನು ಹೆಚ್ಚಿಸುವ ಸಲುವಾಗಿ ಯುಜಿಸಿ ನಿಯಾಮನುಸಾರ ಉಪಕುಲಪತಿಗಳ ನೇಮಕಕ್ಕೆ ಮಾನದಂಡಗಳನ್ನು ಅನುಸರಿಸಲಾಗುವುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರ ಪ್ರಧಾನ ಕಾರ್ಯದರ್ಶಿಗಳು ಉಪಕುಲಪತಿ ಹುದ್ದೆಗೆ ಅರ್ಹರಾದವರ ಪಟ್ಟಿಯನ್ನು ಆಕಾರಾಧಿಯಾಗಿ ಮುಖ್ಯಮಂತ್ರಿಗಳಿಗೆ ಕಳುಹಿಸಿಕೊಡುವರು. ಸದರಿ ಪಟ್ಟಿಯಿಂದ ಒಬ್ಬರನ್ನು ಉಪಕುಲಪತಿಗಳನ್ನಾಗಿ ಮುಖ್ಯಮಂತ್ರಿಗಳು ನೇಮಿಸುವರು. ಇದರೊಂದಿಗೆ ಕೆಲವು ಪದಗಳನ್ನು ಬಿಡಲು 26 ಹಾಗೂ 33ನೇ ಪ್ರಕರಣಗಳಿಗೆ ತಿದ್ದುಪಡಿ ತರಲಾಗಿದೆ ಎಂದು ತಿಳಿಸಿದರು.
ನಂತರ ಆಡಳಿತ ಹಾಗೂ ವಿರೋಧ ಪಕ್ಷಗಳ ಸುಧೀರ್ಘ ಚರ್ಚೆಯ ತರುವಾಯ ವಿಧಾನ ಸಭೆಯಲ್ಲಿ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ ದೊರೆಯಿತು.
ಇಂದು ವಿಧಾನಸಭೆಯಲ್ಲಿ ಅಂಗೀಕರಿಸಿದ್ದಂತ ರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾಲಯ ತಿದ್ದುಪಡಿ ವಿಧೇಯಕವನ್ನು ವಿಧಾನಪರಿಷತ್ತಿನಲ್ಲಿ ಮಂಡಿಸಲಾಗಿತ್ತು. ಇಂತಹ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ ದೊರೆತಿದೆ.
ALERT : ಮೊಬೈಲ್ ಬಳಕೆದಾರರೇ ಎಚ್ಚರ : ಈ ಚಿಹ್ನೆಗಳು ಕಂಡರೆ ನಿಮ್ಮ `ಫೋನ್ ಹ್ಯಾಕ್ ಆಗಿದೆ ಎಂದರ್ಥ.!