ಮುಂಬೈ: ಮುಂಬೈ ಸಮೀಪದ ಕಲ್ಯಾಣ್ ವಸತಿ ಪ್ರದೇಶದಲ್ಲಿ ಗುರುವಾರ ಚಿರತೆಯೊಂದು ದಾಳಿ ನಡೆಸಿದ್ದು, ಮೂವರು ಗಾಯಗೊಂಡಿದ್ದಾರೆ.
ಅರಣ್ಯಾಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿದ್ದು, ಚಿರತೆಯನ್ನು ಸೆರೆ ಹಿಡಿಯುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ನಾನು ಮೊದಲ ಮಹಡಿಯಲ್ಲಿ ಚಿರತೆಯನ್ನು ನೋಡಿದೆ. ಜನರು ಸಹಾಯಕ್ಕಾಗಿ ಕಿರುಚುತ್ತಿದ್ದರು. ಕೂಡಲೇ ವ್ಯಕ್ತಿಯೊಬ್ಬರು ಕಟ್ಟಡದ ಒಳಗೆ ನುಗ್ಗಿದರು. ಅವರ ಮೇಲೆ ಚಿತರೆ ದಾಳಿ ನಡೆಸಿದೆ. ಕೆಲವರು ಕೈಯಲ್ಲಿ ದೊಣ್ಣೆಗಳನ್ನು ಹಿಡಿದು ಚಿತರೆಯನ್ನು ಹೆದರಿಸಿದರು ಎಂದು ಸ್ಥಳೀಯರು ಹೇಳಿದ್ದಾರೆ.
ಪೊವೈ ಪ್ರದೇಶದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಬಾಂಬೆ (ಐಐಟಿ-ಬಿ) ಕ್ಯಾಂಪಸ್ನಲ್ಲಿ ಚಿರತೆ ಕಾಣಿಸಿಕೊಂಡ ಮೂರು ದಿನಗಳ ನಂತರ ಈ ಘಟನೆ ನಡೆದಿದೆ. ಸೋಮವಾರ ಬೆಳಗ್ಗೆ ಅರಣ್ಯ ಇಲಾಖೆಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಲಾಗಿತ್ತು. ಸ್ಥಳಕ್ಕೆ ತಂಡವನ್ನು ಕಳುಹಿಸಿ ತನಿಖೆ ನಡೆಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
BREAKING NEWS: ಶೂಟಿಂಗ್ ವೇಳೆ ನಟ ಉಪೇಂದ್ರ ಅಸ್ವಸ್ಥ, ಆಸ್ಪತ್ರೆಗೆ ದಾಖಲು | Actor Upendra
ನೀವು ಹಠಾತ್ ಸಾವನ್ನಪ್ಪಿದರೆ, ನಿಮ್ಮ PPF ಹಣ ಯಾರ ಕೈ ಸೇರುತ್ತೆ? ಇಲ್ಲಿದೆ ಮಾಹಿತಿ