ಮಂಡ್ಯ :- ಮದ್ದೂರು ತಾಲೂಕಿನ ನೂತನ ತಹಶೀಲ್ದಾರ್ ಆಗಿ ಪರಶುರಾಮ್ ಸತ್ತಿಗೇರಿ ಅವರು ಶುಕ್ರವಾರ ತಾಲ್ಲೂಕು ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಕಳೆದ 9 ತಿಂಗಳಿನಿಂದ ಸೇವೆ ಸಲ್ಲಿಸುತ್ತಿದ್ದ ಡಾ.ಸ್ಮಿತಾರಾಮು ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ಪರಶುರಾಮ್ ಸತ್ತಿಗೇರಿ ಅವರನ್ನು ನೇಮಕ ಮಾಡಲಾಗಿದೆ. ಡಾ.ಸ್ಮಿತಾ ರಾಮು ಅವರಿಗೆ ಯಾವುದೇ ಸ್ಥಳವನ್ನು ತೋರಿಸಿಲ್ಲ. ತಹಶೀಲ್ದಾರ್ ಪರಶುರಾಮ್ ಅವರಿಗೆ ಉಪ ತಹಶೀಲ್ದಾರ್ ಸೋಮಶೇಖರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.
ಪರಶುರಾಮ್ ಸತ್ತಿಗೇರಿ ಮಾತನಾಡಿ, ಅಧಿಕಾರಿಗಳ ಸಭೆ ನಡೆಸಿ ಕಚೇರಿಯ ಸಂಪೂರ್ಣ ಮಾಹಿತಿ ಪಡೆದ ಬಳಿಕ ಆಡಳಿತಕ್ಕೆ ಚುರುಕು ನೀಡಲಾಗುವುದು. ಆಡಳಿತಾತ್ಮಕ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಲಾಗುವುದು.
ತಾಲೂಕು ಕಛೇರಿಯ ಪ್ರತಿಯೊಂದು ಕೆಲಸಗಳನ್ನು ನಿರ್ದಿಷ್ಟ ಅವಧಿಯಲ್ಲಿ ನೀಡಬೇಕು. ಸಾರ್ವಜನಿಕರು ಮತ್ತು ರೈತರನ್ನು ಅನಗತ್ಯವಾಗಿ ಕಚೇರಿಗೆ ಅಲೆಯುವುದಕ್ಕೆ ಕಡಿವಾಣ ಹಾಕಲಾಗುವುದು ಎಂದು ತಿಳಿಸಿದರು. ಇದೇ ವೇಳೆ ತಾಲೂಕು ಕಛೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶುಭ ಕೋರಿದರು.
ವರದಿ : ಗಿರೀಶ್ ರಾಜ್ ಮಂಡ್ಯ