ಬೆಂಗಳೂರು: ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಅವ್ಯವಹಾರ ಪ್ರಕರಣ ಸಿಐಡಿ ತನಿಖೆಗೆ ವಹಿಸಲಾಗುವುದು ಅಂತ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಳೆದ ತಿಂಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸಿಎಂಗೆ ಪತ್ರ ಬರೆದಿದ್ದರು. ಜಿಲ್ಲಾ ಉಸ್ತುವಾರಿ ಸಚಿವೆಯ ಶಿಫಾರಸಿನಂತೆ ಮುಖ್ಯಮಂತ್ರಿಗಳು ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.
ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಕಳಪೆ ಕಾಮಗಾರಿ ಹಾಗೂ ಅವ್ಯವಹಾರ ಕೇಳಿ ಬಂಧಿದೆ.
ಈ ನಡುವೆ ರಾಜ್ಯ ಸರ್ಕಾರದ ಆದೇಶದ ಬಗ್ಗೆ ಮಾತನಾಡಿರುವ ಕಾರ್ಕಳ ಶಾಸಕ ಸುನಿಲ್ ಕುಮಾರ್ ಪ್ರತಿಕ್ರಿಯಿಸಿ, ಸಿಐಡಿ ತನಿಖೆ ನಡೆಸಲು ಮುಂದಾಗಿರುವುದನ್ನು ಸ್ವಾಗತಿಸಿ ಟ್ವೀಟ್ ಮಾಡಿದ್ದಾರೆ. ಟ್ವಿಟ್ನಲ್ಲಿ ಪರಶುರಾಮ ಥೀಂ ಪಾರ್ಕ್ ವಿಚಾರದ ಬಗ್ಗೆ ಅನಗತ್ಯವಾಗಿ ಎಬ್ಬಿಸುತ್ತಿದ್ದ ಊಹಾಪೋಹ ಹಾಗೂ ಸುಳ್ಳು ಆರೋಪಗಳಿಗೆ ಒಂದು ಪೂರ್ಣ ವಿರಾಮ ಬೇಕಿತ್ತು. ಈ ಸುಳ್ಳು ಆರೋಪಗಳ ತನಿಖೆಗಾಗಿ ರಾಜ್ಯ ಸರ್ಕಾರ ಕೊನೆಗೂ ಸಿಐಡಿ ತನಿಖೆ ನಡೆಸಲು ಮುಂದಾಗಿರುವುದನ್ನು ನಾನು ಸ್ವಾಗತಿಸುತ್ತೇನೆ ಅಂತ ಹೇಳಿದ್ದಾರೆ.