Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ `SC-ST’ ಮಹಿಳಾ ಯುವನಿಧಿ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

20/02/2026 6:46 AM

SHOCKING : `TV’ ಸೌಂಡ್ ಕಡಿಮೆ ಮಾಡು ಎಂದಿದ್ದಕ್ಕೆ ಪತಿಯನ್ನೇ ಚಾಕುವಿನಿಂದ ಇರಿದು ಕೊಂದ ಪಾಪಿಪತ್ನಿ !

20/02/2026 6:40 AM

BIG NEWS : ರಾಜ್ಯದಲ್ಲಿ ಮಹಾಯೋಜನೆ ವ್ಯಾಪ್ತಿಯಲ್ಲಿನ ಜಮೀನುಗಳಿಗೆ `ವಿನ್ಯಾಸ ಅನುಮೋದನೆ’ : ಸರ್ಕಾರದಿಂದ ಮಹತ್ವದ ಆದೇಶ

20/02/2026 6:28 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೋಷಕರ ಗಮನಕ್ಕೆ : ನಾಳೆ ವಸತಿ ಶಾಲೆಗಳ 6ನೇ ತರಗತಿಗೆ ಪ್ರವೇಶ ಪರೀಕ್ಷೆ
KARNATAKA

ಪೋಷಕರ ಗಮನಕ್ಕೆ : ನಾಳೆ ವಸತಿ ಶಾಲೆಗಳ 6ನೇ ತರಗತಿಗೆ ಪ್ರವೇಶ ಪರೀಕ್ಷೆ

By kannadanewsnow5714/02/2025 6:31 AM

ಚಿತ್ರದುರ್ಗ : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧೀನದಲ್ಲಿರುವ ವಿವಿಧ ವಸತಿ ಶಾಲೆಗಳಿಗೆ 06 ನೇ ತರಗತಿ ಪ್ರವೇಶಕ್ಕೆ ದಾಖಲಾತಿ ಪಡೆಯಲು ಪ್ರವೇಶ ಪರೀಕ್ಷೆ ಫೆ. 15 ರಂದು ಜಿಲ್ಲೆಯಾದ್ಯಂತ ನಡೆಯಲಿದ್ದು, ಅಧಿಕಾರಿಗಳು ಪರೀಕ್ಷಾ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಸೂಚನೆ ನೀಡಿದರು.

ವಸತಿ ಶಾಲೆಗಳಲ್ಲಿ ಬರುವ ಶೈಕ್ಷಣಿಕ ವರ್ಷಕ್ಕೆ 06 ನೇ ತರಗತಿ ದಾಖಲಿಗೆ ಪ್ರವೇಶ ಪರೀಕ್ಷೆ ನಡೆಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧೀನದಲ್ಲಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾ ಗಾಂಧಿ, ಡಾ. ಬಿ.ಆರ್. ಅಂಬೇಡ್ಕರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಸಂಗೊಳ್ಳಿ ರಾಯಣ್ಣ, ಕವಿ ರನ್ನ, ಗಾಂಧಿ ತತ್ವ, ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ 06 ನೇ ತರಗತಿ ಪ್ರವೇಶಕ್ಕೆ ದಾಖಲಾತಿ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಫೆ. 15 ರಂದು ಮಧ್ಯಾಹ್ನ 02.30 ರಿಂದ ಸಂಜೆ 04.30 ರವರೆಗೆ ಜಿಲ್ಲೆಯ ಒಟ್ಟು 20 ಪರೀಕ್ಷಾ ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದ್ದು, ಒಟ್ಟು 7317 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೊಂದಾಯಿಸಿಕೊಂಡಿದ್ದಾರೆ. ಪ್ರವೇಶ ಪರೀಕ್ಷೆಯನ್ನು ವ್ಯವಸ್ಥಿತ ರೀತಿಯಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶ ಮಾಡಿಕೊಡದಂತೆ, ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡಿಕೊಂಡು ನಡೆಸಬೇಕು. ಪರೀಕ್ಷಾ ಕೇಂದ್ರಗಳಿಗೆ ನಿಗದಿತ ವೇಳೆಯೊಳಗೆ ಆಯಾ ಮಾರ್ಗಾಧಿಕಾರಿಗಳು ಪ್ರಶ್ನೆಪತ್ರಿಕೆಯನ್ನು ತಲುಪಿಸಬೇಕು. ಪರೀಕ್ಷೆ ಬಳಿಕ ಎಲ್ಲ ಸುರಕ್ಷತಾ ಕ್ರಮಗಳನ್ನು ಕೈಗೊಂಡು, ನಿಗದಿತ ಸ್ಥಳಕ್ಕೆ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನಕ್ಕಾಗಿ ತಲುಪಿಸುವ ಕಾರ್ಯವನ್ನು ಕೈಗೊಳ್ಳಬೇಕು. ಈಗಾಗಲೆ ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಪೊಲೀಸ್ ಇಲಾಖೆಯವರು ಪರೀಕ್ಷಾ ದಿನದಂದು ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು. ಪರೀಕ್ಷಾ ಕೇಂದ್ರದೊಳಗೆ ಯಾವುದೇ ಮೊಬೈಲ್, ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸದಂತೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು, ಹಾಗೂ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ಪ್ರವೇಶ ಸಂದರ್ಭದಲ್ಲಿ ಸೂಕ್ತ ರೀತಿಯಲ್ಲಿ ತಪಾಸಣೆಯನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಪುಟ್ಟಸ್ವಾಮಿ ಅವರು ಪ್ರವೇಶ ಪರೀಕ್ಷೆ ಕುರಿತು ಮಾಹಿತಿ ನೀಡಿ, ಪ್ರವೇಶ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 20 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಿದ್ದು, 7317 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಚಳ್ಳಕೆರೆ ತಾಲ್ಲೂಕಿನಲ್ಲಿ 05 ಪರೀಕ್ಷಾ ಕೇಂದ್ರಗಳಲ್ಲಿ 1919 ವಿದ್ಯಾರ್ಥಿಗಳು. ಚಿತ್ರದುರ್ಗ ತಾಲ್ಲೂಕಿನ 02 ಕೇಂದ್ರಗಳಲ್ಲಿ 915 ವಿದ್ಯಾರ್ಥಿಗಳು, ಹಿರಿಯೂರಿನ 03 ಕೇಂದ್ರಗಳಲ್ಲಿ 1341 ವಿದ್ಯಾರ್ಥಿಗಳು, ಹೊಳಲ್ಕೆರೆಯ 02 ಕೇಂದ್ರಗಳಲ್ಲಿ 591 ವಿದ್ಯಾರ್ಥಿಗಳು, ಹೊಸದುರ್ಗದ 04 ಕೇಂದ್ರಗಳಲ್ಲಿ 1297 ವಿದ್ಯಾರ್ಥಿಗಳು ಹಾಗೂ ಮೊಳಕಾಲ್ಮೂರು ತಾಲ್ಲೂಕಿನ 04 ಪರೀಕ್ಷಾ ಕೇಂದ್ರಗಳಲ್ಲಿ 1254 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆ ತಲುಪಿಸಲು ಹಾಗೂ ಉತ್ತರ ಪತ್ರಿಕೆ ಸ್ವೀಕರಿಸಲು ಈಗಾಗಲೆ 21 ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ. ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಕ್ಯಾಲ್ಕುಲೇಟರ್, ಮೊಬೈಲ್ ಫೋನ್, ಬ್ಲೂಟೂತ್ ಡಿವೈಸ್, ವೈರ್‍ಲೆಸ್ ಸೆಟ್ ಇತ್ಯಾದಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು ನಿಷೇಧಿಸಲಾಗಿದೆ ಎಂದರು.

ಸಭೆಯಲ್ಲಿ ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸಿಲ್ದಾರರು, ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ ಉಪನ್ಯಾಸಕರು, ಪ್ರಾಂಶುಪಾಲರುಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Parents: Entrance exam for class 6 of residential schools to be held tomorrow
Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ `SC-ST’ ಮಹಿಳಾ ಯುವನಿಧಿ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

20/02/2026 6:46 AM1 Min Read

BIG NEWS : ರಾಜ್ಯದಲ್ಲಿ ಮಹಾಯೋಜನೆ ವ್ಯಾಪ್ತಿಯಲ್ಲಿನ ಜಮೀನುಗಳಿಗೆ `ವಿನ್ಯಾಸ ಅನುಮೋದನೆ’ : ಸರ್ಕಾರದಿಂದ ಮಹತ್ವದ ಆದೇಶ

20/02/2026 6:28 AM2 Mins Read

BIG NEWS : ಬಲವಾದ ಆಧಾರವಿಲ್ಲದೆ ಪತ್ನಿ ನಡತೆ ಅನುಮಾನಿಸುವುದು ಮಾನಸಿಕ ಕೌರ್ಯ : ಹೈಕೋರ್ಟ್ ಮಹತ್ವದ ತೀರ್ಪು

20/02/2026 6:23 AM1 Min Read
Recent News

ರಾಜ್ಯ ಸರ್ಕಾರದಿಂದ `SC-ST’ ಮಹಿಳಾ ಯುವನಿಧಿ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

20/02/2026 6:46 AM

SHOCKING : `TV’ ಸೌಂಡ್ ಕಡಿಮೆ ಮಾಡು ಎಂದಿದ್ದಕ್ಕೆ ಪತಿಯನ್ನೇ ಚಾಕುವಿನಿಂದ ಇರಿದು ಕೊಂದ ಪಾಪಿಪತ್ನಿ !

20/02/2026 6:40 AM

BIG NEWS : ರಾಜ್ಯದಲ್ಲಿ ಮಹಾಯೋಜನೆ ವ್ಯಾಪ್ತಿಯಲ್ಲಿನ ಜಮೀನುಗಳಿಗೆ `ವಿನ್ಯಾಸ ಅನುಮೋದನೆ’ : ಸರ್ಕಾರದಿಂದ ಮಹತ್ವದ ಆದೇಶ

20/02/2026 6:28 AM

BIG NEWS : ಬಲವಾದ ಆಧಾರವಿಲ್ಲದೆ ಪತ್ನಿ ನಡತೆ ಅನುಮಾನಿಸುವುದು ಮಾನಸಿಕ ಕೌರ್ಯ : ಹೈಕೋರ್ಟ್ ಮಹತ್ವದ ತೀರ್ಪು

20/02/2026 6:23 AM
State News
KARNATAKA

ರಾಜ್ಯ ಸರ್ಕಾರದಿಂದ `SC-ST’ ಮಹಿಳಾ ಯುವನಿಧಿ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

By kannadanewsnow5720/02/2026 6:46 AM KARNATAKA 1 Min Read

ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಜಂಟಿ ನಿರ್ದೇಶಕರ ಜಿಲ್ಲಾ ಕಛೇರಿ ಕೊಪ್ಪಳ ವತಿಯಿಂದ…

BIG NEWS : ರಾಜ್ಯದಲ್ಲಿ ಮಹಾಯೋಜನೆ ವ್ಯಾಪ್ತಿಯಲ್ಲಿನ ಜಮೀನುಗಳಿಗೆ `ವಿನ್ಯಾಸ ಅನುಮೋದನೆ’ : ಸರ್ಕಾರದಿಂದ ಮಹತ್ವದ ಆದೇಶ

20/02/2026 6:28 AM

BIG NEWS : ಬಲವಾದ ಆಧಾರವಿಲ್ಲದೆ ಪತ್ನಿ ನಡತೆ ಅನುಮಾನಿಸುವುದು ಮಾನಸಿಕ ಕೌರ್ಯ : ಹೈಕೋರ್ಟ್ ಮಹತ್ವದ ತೀರ್ಪು

20/02/2026 6:23 AM

ರಾಜ್ಯದ `SSLC-PUC’ ವಿದ್ಯಾರ್ಥಿಗಳೇ ಗಮನಿಸಿ : ನಿಮಗೆ `ಪರೀಕ್ಷೆ’ ಬಗ್ಗೆ ಗೊಂದಲ, ಸಮಸ್ಯೆಗಳಿದ್ದಲ್ಲಿ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ !

20/02/2026 6:21 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.