ಬಾಗಲಕೋಟೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಆರು ವಿಷಯದಲ್ಲಿ ಫೇಲ್ ಆದ ಪುತ್ರನಿಗೆ ಪೋಷಕರು ಕೇಕ್ ತಿನ್ನಿಸಿ ಆತ್ಮಸ್ಥೈರ್ಯ ತುಂಬಿರುವ ಘಟಬೆ ಬಾಗಲಕೋಟೆಯಲ್ಲಿ ನಡೆದಿದೆ.
ಬಸವೇಶ್ವರ ಹೈಸ್ಕೂಲ್‌ನಲ್ಲಿ ಆಂಗ್ಲ ಮಾಧ್ಯಮದಲ್ಲಿ 10ನೇ ತರಗತಿ ವಿದ್ಯಾರ್ಥೀ ಅಭಿಷೇಕ್ ಯಲ್ಲಪ್ಪ ಚೊಳಚಗುಡ್ಡ 625ಕ್ಕೆ 200 ಅಂಕ ಪಡೆದು ಫೇಲ್ ಆಗಿದ್ದಾರೆ.ಈ ನಡುವೆ ಬೇಸರದಲ್ಲಿದ್ದ ಅಭಿಷೇಕ್‌ಗೆ ಆತ್ಮಸ್ಥೈರ್ಯ ತುಂಬಲು ಪೋಷಕರು ಆತನಿಗೆ ಕೇಕ್ ತಿನ್ನಿಸಿ ಸಿಹಿ ಮುತ್ತು ನೀಡಿ ಸಮಾಧಾನ ಮಾಡಿದ್ದಾರೆ.ನಾನು ಪರೀಕ್ಷೆಯಲ್ಲಿ ಫೇಲ್ ಆಗಿರಬಹುದು, ಜೀವನದಲ್ಲಿ ಫೇಲ್ ಆಗಲ್ಲ. ಮತ್ತೆ ಪ್ರಯತ್ನ ಮಾಡಿ ಪಾಸ್ ಆಗುತ್ತೇನೆ. ಪರೀಕ್ಷೆಯಲ್ಲಿ ಫೇಲ್ ಆದರೂ ಜೀವನದಲ್ಲಿ ಸಾಧಿಸಿ ತೋರಿಸುತ್ತೇನೆ ಎಂದು ಅಭಿಷೇಕ್ ಹೇಳಿದ್ದಾನೆ.