ಧಾರವಾಡ : ಧಾರವಾಡ ಶಹರದ ಸಪ್ತಾಪುರ ರಸ್ತೆಯಲ್ಲಿರುವ ಮಿಲಿಟರಿ ಬಾಲಕಿಯರ ವಸತಿ ನಿಲಯದಲ್ಲಿ 2024-25ನೇ ಶೈಕ್ಷಣಿಕ ವರ್ಷದ ಪ್ರವೇಶಕ್ಕಾಗಿ ಧಾರವಾಡ, ಗದಗ, ಹಾವೇರಿ ಮತ್ತು ಬಳ್ಳಾರಿ ಜಿಲ್ಲೆಗಳ ಗ್ರಾಮಾಂತರ ಪ್ರದೇಶ ಹಾಗೂ ರಾಜ್ಯದ ಇತರ ಜಿಲ್ಲೆಗಳಲ್ಲಿರುವ ಯುದ್ದದಲ್ಲಿ ಮಡಿದ ಮತ್ತು ಮಾಜಿ ಸೈನಿಕರ ಹೆಣ್ಣು ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಾಲಕಿರಯರ ವಿದ್ಯಾರ್ಥಿನಿಲಯದಲ್ಲಿ 5ನೇ ತರಗತಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತಿದ್ದು, ಮಾಜಿ ಸೈನಿಕರ ಹೆಣ್ಣು ಮಕ್ಕಳು ಈ ಸೌಲಭ್ಯದ ಉಪಯೋಗ ಪಡೆಯಬಹುದಾಗಿದೆ. ಧಾರವಾಡ ನಗರದಲ್ಲಿರುವ ವಿದ್ಯಾ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಗೆ ಮಾತ್ರ ವಸತಿ ನಿಲಯದಲ್ಲಿ ಪ್ರವೇಶ ನೀಡಲಾಗುವುದು.
ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿರುವ ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಪಡೆದು, ಏಪ್ರಿಲ್ 25, 2024 ರೊಳಗಾಗಿ ಸಲ್ಲಿಸಬೇಕು
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2440176 ಗೆ ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.