ಧಾರವಾಡ : ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಮನನೊಂದು ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶ್ವೇತಾ ಕೊಟೆನ್ನವರ್ (18) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಮೃತ ಶ್ವೇತ ಹಲವು ವರ್ಷಗಳಿಂದ ಹುಬ್ಬಳ್ಳಿ ತಾಲೂಕಿನ ಕೆರೆಸೂರ ಗ್ರಾಮದ ನಾಗರಾಜ್ ಎನ್ನುವ ಯುವಕನನ್ನ ಪ್ರೀತಿಸುತ್ತಿದ್ದಳು. ಈ ವಿಷಯವನ್ನು ತನ್ನ ಕುಟುಂಬಸ್ಥರಿಗೆ ತಿಳಿಸಿ, ನಾಗರಾಜ್‌ನನ್ನು ಮದುವೆಯಾಗುವ ಇಂಗಿತ ವ್ಯಕ್ತಪಡಿಸಿದ್ದಳು. ಆದರೆ ಇದಕ್ಕೆ ಕುಟುಂಬಸ್ಥರು ಒಪ್ಪಿರಲಿಲ್ಲ. ಇದರಿಂದ ಮನನೊಂದು ವಿಷ ಸೇವಿಸಿ ಶ್ವೇತ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ಹಿನ್ನೆಲೆ: ಮೃತ ಶ್ವೇತಾ ಕಳೆದ ಕೆಲವು ವರ್ಷಗಳಿಂದ ಹುಬ್ಬಳ್ಳಿ ತಾಲೂಕಿನ ಕೆರೆಸೂರ ಗ್ರಾಮದ ನಾಗರಾಜ್ ಎಂಬ ಯುವಕನನ್ನು ಗಾಢವಾಗಿ ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ತನ್ನ ಪ್ರೇಮ ವಿಷಯವನ್ನು ಪೋಷಕರಿಗೆ ತಿಳಿಸಿದ್ದ ಯುವತಿ, ತಾನು ನಾಗರಾಜ್‌ನನ್ನೇ ಮದುವೆಯಾಗುವುದಾಗಿ ತನ್ನ ಇಚ್ಛೆಯನ್ನು ವ್ಯಕ್ತಪಡಿಸಿದ್ದಳು. ಆದರೆ, ಯುವತಿಯ ಈ ಪ್ರೇಮ ಸಂಬಂಧಕ್ಕೆ ಮನೆಯವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.
ವಿಷ ಸೇವಿಸಿ ಆತ್ಮಹತ್ಯೆ: ಪ್ರೀತಿಸಿದವನ ಜೊತೆ ಮದುವೆ ಮಾಡಲು ಕುಟುಂಬಸ್ಥರು ಒಪ್ಪದಿದ್ದಾಗ ತೀವ್ರವಾಗಿ ನೊಂದ ಶ್ವೇತಾ, ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿದ್ದಾಳೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಕೊನೆಯುಸಿರೆಳೆದಿದ್ದಾಳೆ.
ಪೊಲೀಸ್ ದೂರು ದಾಖಲು: ಕೈಗೆ ಬಂದ ಮಗಳು ಪ್ರೀತಿಯ ವಿಷಯಕ್ಕಾಗಿ ಪ್ರಾಣ ಕಳೆದುಕೊಂಡಿರುವುದು ಯರಗುಪ್ಪಿ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಿಸಿದೆ. ಈ ಸಾವಿನ ಕುರಿತಾಗಿ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸುವ ಪ್ರಕ್ರಿಯೆ ನಡೆಯುತ್ತಿದೆ.








