Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ​ದುಬೈನಲ್ಲಿ ಭೀಕರ ರಸ್ತೆ ಅಪಘಾತ: ಹಲವು ಭಾರತೀಯ ಕಾರ್ಮಿಕರ ದುರ್ಮರಣ

GOOD NEWS : ರಾಜ್ಯದ ವಸತಿ ಕಟ್ಟಡ ಮಾಲೀಕರಿಗೆ ಗುಡ್ ನ್ಯೂಸ್ : ವಿದ್ಯುತ್ ಸಂಪರ್ಕ ಪಡೆಯಲು `ಒಸಿ’ ವಿನಾಯಿತಿ ನೀಡಿ ಸರ್ಕಾರ ಆದೇಶ

BIG NEWS : ಉಜ್ವಲ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್ : ಸಬ್ಸಿಡಿ `LPG’ ಸಿಲಿಂಡರ್ ವರ್ಷಕ್ಕೆ 9 ರಿಂದ 4ಕ್ಕೆ ಇಳಿಕೆ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೋಷಕರು ಅಥವಾ ಹಿರಿಯ ನಾಗರಿಕರನ್ನ ಆರೈಕೆ ಮಾಡದಿದ್ದರೆ ಅವರ ಆಸ್ತಿ ಸಿಗಲ್ಲ: ಸಚಿವ ಕೃಷ್ಣಬೈರೇಗೌಡ
KARNATAKA

ಪೋಷಕರು ಅಥವಾ ಹಿರಿಯ ನಾಗರಿಕರನ್ನ ಆರೈಕೆ ಮಾಡದಿದ್ದರೆ ಅವರ ಆಸ್ತಿ ಸಿಗಲ್ಲ: ಸಚಿವ ಕೃಷ್ಣಬೈರೇಗೌಡ

By ಅವಿನಾಶ್‌ ಆರ್‌ ಭೀಮಸಂದ್ರ

ಬೆಂಗಳೂರು: ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದಿದ್ದರೆ, ತನ್ನ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ಅವರು ನೀಡಿದ ವಿಲ್-ಧಾನಪತ್ರವನ್ನು ರದ್ದು ಮಾಡುವ ಅವಕಾಶವನ್ನು ಕೇಂದ್ರ ಸರ್ಕಾರದ “ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ 2007” ನೀಡಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.

ಇಂದು ವಿಧಾನ ಪರಿಷತ್‍ನಲ್ಲಿ ಸದಸ್ಯೆ ಬಲ್ಕೀಸ್ ಬಾನು ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಕೇಂದ್ರ ಸರ್ಕಾರದ “ಇತ್ತೀಚಿನ ದಿನಗಳಲ್ಲಿ ಮಕ್ಕಳು ತಮ್ಮ ತಂದೆ-ತಾಯಿಯನ್ನೇ ಆರೈಕೆ ಮಾಡದಂತಹ ಹಲವರು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಒಂದು ವೇಳೆ ಮಕ್ಕಳು ಅಥವಾ ಸಂಬಂಧಿಕರು ತಮ್ಮನ್ನು ಆರೈಕೆ ಮಾಡದಿದ್ದರೆ ಅವರ ಹೆಸರಿಗೆ ಮಾಡಿರುವ ವಿಲ್ ಅಥವಾ ದಾನಪತ್ರವನ್ನು ರದ್ದು ಮಾಡುವ ಅಧಿಕಾರ ಹಿರಿಯ ನಾಗರೀಕರಿಗೆ ಇದೆ” ಎಂದು ಮಾಹಿತಿ ನೀಡಿದರು.

ಕೇಂದ್ರ ಸರ್ಕಾರ 2007 ರಲ್ಲೇ ‘ಪೆÇೀಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ’ ಯನ್ನು ಜಾರಿಗೆ ತಂದಿದೆ. ಆದರೆ, ಈ ಬಗ್ಗೆ ಹಲವರಿಗೆ ಮಾಹಿತಿಯೇ ಇಲ್ಲ. ಈ ಮಾಹಿತಿಯನ್ನು ಪರಿಣಾಮಕಾರಿಯಾಗಿ ಎಲ್ಲರಿಗೂ ತಲುಪಿಸಬೇಕು ಎಂಬ ಉದ್ದೇಶದಿಂದಲೇ ಪರಿಷತ್‍ನಲ್ಲಿ ಈ ಕಾಯ್ದೆಯ ಬಗ್ಗೆ ಉಲ್ಲೇಖಿಸುತ್ತಿದ್ದೇನೆ. ಈ ಕಾಯ್ದೆಯ ಪ್ರಕಾರ ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರೀಕರನ್ನು ಆರೈಕೆ ಮಾಡಬೇಕು. ಔಷಧಿ ಸೇರಿದಂತೆ ಅವರ ಮಾಸಿಕ ಖರ್ಚಿಗೆ ಹಣ ನೀಡಬೇಕು. ಒಂದು ವೇಳೆ ಹಣ ನೀಡದಿದ್ದರೆ ಅಥವಾ ಆರೈಕೆ ಮಾಡಲು ನಿರ್ಲಕ್ಷಿಸಿದರೆ ಹಿರಿಯ ನಾಗರೀಕರು ಸೆಕ್ಷನ್ 09ರ ಅಡಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಬಳಿ ದೂರು ಸಲ್ಲಿಸಬಹುದು ಎಂದು ತಿಳಿಸಿದರು.

ಹಿರಿಯ ನಾಗರೀಕರ ದೂರು ಸಾಬೀತಾದರೆ, ತಂದೆ ತಾಯಿಯಿಂದ ಆಸ್ತಿ ಪಡೆದು ಅವರ ಆರೈಕೆ ಮಾಡದಿದ್ದರೆ, ಸೆಕ್ಷನ್ 23ರಂತೆ ಪೋಷಕರು ತಮ್ಮ ಮಕ್ಕಳ ಅಥವಾ ಸಂಬಂಧಿಕರ ಹೆಸರಿನಲ್ಲಿ ಬರೆದಿರುವ ವಿಲ್ ಅಥವಾ ದಾನಪತ್ರವನ್ನು ರದ್ದುಗೊಳಿಸಿ ಮತ್ತೆ ಪೋಷಕರ ಹೆಸರಿಗೇ ಮರುಸ್ಥಾಪಿಸಲು ಕಾನೂನಿನಲ್ಲಿ ಅವಕಾಶ ಇದೆ. ಈ ಜವಾಬ್ದಾರಿಯನ್ನು ಉಪ ವಿಭಾಗಾಧಿಕಾರಿಗಳಿಗೆ ನೀಡಲಾಗಿದೆ. ಈಗಾಗಲೇ ಉಪ ವಿಭಾಗಾಧಿಕಾರಿಗಳ ಮುಂದೆ ಸಾವಿರಾರು ಪ್ರಕರಣಗಳಿವೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿ ತಿಂಗಳೂ ಉಪ ವಿಭಾಗಾಧಿಕಾರಿಗಳ ಜೊತೆ ಮಾಸಿಕ ಸಭೆ ನಡೆಸಲಾಗುತ್ತಿದೆ. ಅಲ್ಲದೆ, ಜಿಲ್ಲಾಧಿಕಾರಿಗಳಿಗೆ ಅಪೀಲು ಹೋಗಲೂ ಸಹ ಅರ್ಜಿದಾರರಿಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

Parents or senior citizens will not get their property if they are not taken care of: Minister Krishna Byre Gowda ಪೋಷಕರು ಅಥವಾ ಹಿರಿಯ ನಾಗರಿಕರನ್ನ ಆರೈಕೆ ಮಾಡದಿದ್ದರೆ ಅವರ ಆಸ್ತಿ ಸಿಗಲ್ಲ: ಸಚಿವ ಕೃಷ್ಣಬೈರೇಗೌಡ
Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯದ ವಸತಿ ಕಟ್ಟಡ ಮಾಲೀಕರಿಗೆ ಗುಡ್ ನ್ಯೂಸ್ : ವಿದ್ಯುತ್ ಸಂಪರ್ಕ ಪಡೆಯಲು `ಒಸಿ’ ವಿನಾಯಿತಿ ನೀಡಿ ಸರ್ಕಾರ ಆದೇಶ

2 Mins Read

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 3,991 ಕಾನ್ಸ್‌ ಟೇಬಲ್ ನೇಮಕಾತಿ : ನಾಳೆಯಿಂದಲೇ ಅರ್ಜಿ ಸಲ್ಲಿಕೆ ಆರಂಭ

1 Min Read

ರಾಜ್ಯದ ಜನತೆಗೆ ಬಿಗ್ ಶಾಕ್ : ಇಂದಿನಿಂದ ಖಾಸಗಿ ಬಸ್ ಟಿಕೆಟ್ ದರ 8% ವರೆಗೆ ಏರಿಕೆ | Bus ticket prices Hike

1 Min Read
Recent News

BREAKING: ​ದುಬೈನಲ್ಲಿ ಭೀಕರ ರಸ್ತೆ ಅಪಘಾತ: ಹಲವು ಭಾರತೀಯ ಕಾರ್ಮಿಕರ ದುರ್ಮರಣ

GOOD NEWS : ರಾಜ್ಯದ ವಸತಿ ಕಟ್ಟಡ ಮಾಲೀಕರಿಗೆ ಗುಡ್ ನ್ಯೂಸ್ : ವಿದ್ಯುತ್ ಸಂಪರ್ಕ ಪಡೆಯಲು `ಒಸಿ’ ವಿನಾಯಿತಿ ನೀಡಿ ಸರ್ಕಾರ ಆದೇಶ

BIG NEWS : ಉಜ್ವಲ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್ : ಸಬ್ಸಿಡಿ `LPG’ ಸಿಲಿಂಡರ್ ವರ್ಷಕ್ಕೆ 9 ರಿಂದ 4ಕ್ಕೆ ಇಳಿಕೆ.!

ಪರೀಕ್ಷೆಯಲ್ಲಿ ಕಾಪಿ ಹೊಡೆದ ಮಗ, ತಡೆದ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ ಪೊಲೀಸ್ ತಂದೆ; ವಿಡಿಯೋ ವೈರಲ್

State News
KARNATAKA

GOOD NEWS : ರಾಜ್ಯದ ವಸತಿ ಕಟ್ಟಡ ಮಾಲೀಕರಿಗೆ ಗುಡ್ ನ್ಯೂಸ್ : ವಿದ್ಯುತ್ ಸಂಪರ್ಕ ಪಡೆಯಲು `ಒಸಿ’ ವಿನಾಯಿತಿ ನೀಡಿ ಸರ್ಕಾರ ಆದೇಶ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸ್ವಂತ ಮನೆ ನಿರ್ಮಿಸಿಕೊಂಡಿರುವ ಸಾರ್ವಜನಿಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ.…

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 3,991 ಕಾನ್ಸ್‌ ಟೇಬಲ್ ನೇಮಕಾತಿ : ನಾಳೆಯಿಂದಲೇ ಅರ್ಜಿ ಸಲ್ಲಿಕೆ ಆರಂಭ

ರಾಜ್ಯದ ಜನತೆಗೆ ಬಿಗ್ ಶಾಕ್ : ಇಂದಿನಿಂದ ಖಾಸಗಿ ಬಸ್ ಟಿಕೆಟ್ ದರ 8% ವರೆಗೆ ಏರಿಕೆ | Bus ticket prices Hike

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ವೇಳಾಪಟ್ಟಿ ಪ್ರಕಟ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.