ಬೆಂಗಳೂರು : ರಾಜ್ಯಾದ್ಯಂತ ಮೇ. 29 ರಿಂದ 2025-26 ನೇ ಸಾಲಿನ ಶಾಲೆಗಳು ಆರಂಭವಾಗಲಿದ್ದು, ಒಂದನೇ ತರಗತಿಗೆ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರು ಈ ಪ್ರಮುಖ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ.
ಮಕ್ಕಳನ್ನು ಈ ಬಾರಿ ಹೊಸದಾಗಿ ಒಂದನೇ ತರಗತಿ ಪ್ರವೇಶಕ್ಕೆ ಹೊರಟಿದ್ದರೆ ನೀವು ಈ ವಿಷಯಗಳ ಬಗ್ಗೆ ತಿಳಿದುಕೊಂಡಿರಲೇ ಬೇಕು. ಒಂದನೇ ತರಗತಿ ಅಡ್ಮಿಷನ್ಗೆ ಮೊದಲನೇಯದಾಗಿ ಮಗುವಿನ ಆಧಾರ್ ಕಾರ್ಡ್ ಹೊಂದಿರಲೇ ಬೇಕಾಗುತ್ತದೆ. ರೇಷನ್ ಕಾರ್ಡ್ ಮತ್ತು ಮಗುವಿನ ಭಾವಚಿತ್ರವನ್ನು ನೀಡಬೇಕಾಗುತ್ತದೆ. 2 ಭಾವಚಿತ್ರವನ್ನು ನೀಡುವುದು ಕಡ್ಡಾಯ. ಇವಿಷ್ಟು ಎಲ್ಲಾ ವಿದ್ಯಾರ್ಥಿಗಳಿಗೂ ಕಡ್ಡಾಯವಾಗಿದೆ.
ಒಂದನೇ ತರಗತಿ ಪ್ರವೇಶಕ್ಕೆ ಈ ದಾಖಲೆಗಳು ಕಡ್ಡಾಯ
ಮಗುವಿನ ಆಧಾರ್ ಕಾರ್ಡ್
ಮಗುವಿನ ಜನನ ಪ್ರಮಾಣ ಪತ್ರ
ಮಗುವಿನ ಜಾತಿ ಪ್ರಮಾಣ ಪತ್ರ
ರೇಷನ್ ಕಾರ್ಡ್
ಪೋಷಕರ ಆಧಾರ್ ಕಾರ್ಡ್
ತಂದೆ ಅಥವಾ ತಾಯಿಯ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ
2025-26 ಶೈಕ್ಷಣಿಕ ಸಾಲಿನ ಶಾಲಾ ಕರ್ತವ್ಯದ ದಿನಗಳು, ರಜಾ ಅವಧಿಯ ವೇಳಾಪಟ್ಟಿ ಬಿಡುಗಡೆ ಮಾಡಿ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2024-25ನೇ ಸಾಲಿನ ಚಟುವಟಿಕೆಗಳು ಮುಕ್ತಾಯವಾಗುತ್ತಲ್ಲಿದ್ದು, ಮುಂದಿನ 2025-26ನೇ ಸಾಲಿನ ಶೈಕ್ಷಣಿಕ ಸಾಲಿನ ಚಟುವಟಿಕೆಗಳನ್ನು ಪ್ರಾರಂಭಿಸಲು ಸದರಿ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ ದಿನಾಂಕ: 29.05.2025 ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ. ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ನಿಗಧಿಪಡಿಸಲಾಗಿದೆ. ಪ್ರಯುಕ್ತ ರಾಜ್ಯದ ಎಲ್ಲಾ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಟಾನಗೊಳಿಸಲು ಸಹಾಯವಾಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, ಕರ್ತವ್ಯದ ದಿನಗಳು ಮತ್ತು ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ಈ ಕೆಳಕಂಡಂತೆ ನಿಗದಿಪಡಿಸಲಾಗಿದ್ದು, ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಿ ಮತ್ತು ಅನುಪಾಲನೆ ಮಾಡಲು ತಿಳಿಸಿದೆ.