Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ ಸರ್ಕಾರಿ ಶಿಕ್ಷಕರು, ಅಧಿಕಾರಿಗಳ ಸೇವಾ ವಿವರಗಳನ್ನು `EEDS’ ತಂತ್ರಾಂಶದಲ್ಲಿ ಇಂದೀಕರಣ : ಶಿಕ್ಷಣ ಇಲಾಖೆ ಮಹತ್ವದ ಆದೇಶ

23/01/2026 5:05 AM

ಪೋಷಕರೇ ನಿಮ್ಮ ಮಕ್ಕಳನ್ನು `ಆದರ್ಶ ವಿದ್ಯಾಲಯ’ಕ್ಕೆ ಸೇರಿಸಬೇಕಾ? ಇಂದಿನಿಂದ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ

23/01/2026 5:03 AM

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು `ಜನಪ್ರತಿನಿಧಿ’ಗಳ ದೂರವಾಣಿ ಸಂಖ್ಯೆ ಇಟ್ಟುಕೊಳ್ಳುವುದು ಕಡ್ಡಾಯ

23/01/2026 5:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೋಷಕರೇ ನಿಮ್ಮ ಮಕ್ಕಳನ್ನು `ಆದರ್ಶ ವಿದ್ಯಾಲಯ’ಕ್ಕೆ ಸೇರಿಸಬೇಕಾ? ಇಂದಿನಿಂದ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ
KARNATAKA

ಪೋಷಕರೇ ನಿಮ್ಮ ಮಕ್ಕಳನ್ನು `ಆದರ್ಶ ವಿದ್ಯಾಲಯ’ಕ್ಕೆ ಸೇರಿಸಬೇಕಾ? ಇಂದಿನಿಂದ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ

By kannadanewsnow5723/01/2026 5:03 AM

ಬೆಂಗಳೂರು : 2025-26ನೇ ಸಾಲಿನಲ್ಲಿ 2026-27ನೇ ಶೈಕ್ಷಣಿಕ ವರ್ಷಕ್ಕೆ 74 ಆದರ್ಶ ವಿದ್ಯಾಲಯಗಳಿಗೆ 6ನೇ ತರಗತಿಗೆ ನಡೆಸುವ ಪ್ರವೇಶ ಪರೀಕ್ಷೆ ಹಾಗೂ ದಾಖಲಾತಿಯ ಬಗ್ಗೆ ಮಾರ್ಗಸೂಚಿ ಪ್ರಕಟಿಸಲಾಗಿದೆ.

2026-27ನೇ ಸಾಲಿನಲ್ಲಿ ಪ್ರತಿ ಆದರ್ಶ ವಿದ್ಯಾಲಯದ 6ನೇ ತರಗತಿಗೆ 120 ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಲು ಆಯ್ಕೆ ಪರೀಕ್ಷೆ ನಡೆಸಬೇಕಾಗಿರುತ್ತದೆ. ಈ ಪ್ರವೇಶ ಪರೀಕ್ಷೆಯ ಪ್ರಕ್ರಿಯೆಯನ್ನು ಸಮಗ್ರ ಶಿಕ್ಷಣ-ಕರ್ನಾಟಕ ಹಾಗೂ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನ ವತಿಯಿಂದ ಜಂಟಿಯಾಗಿ ನಡೆಸಲು ತೀರ್ಮಾನಿಸಲಾಗಿದ್ದು, ಆಯ್ಕೆ ಪರೀಕ್ಷೆಯನ್ನು ನಡೆಸಲು ಜಿಲ್ಲಾ ಉಪನಿರ್ದೇಶಕರು (ಆಡಳಿತ), ಉಪನಿರ್ದೇಶಕರು (ಅಭಿವೃದ್ಧಿ), ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಆದರ್ಶ ವಿದ್ಯಾಲಯಗಳ ಮುಖ್ಯ ಶಿಕ್ಷಕರು ಮತ್ತು ಐದನೆಯ ತರಗತಿಗಳು ನಡೆಯುತ್ತಿರುವ ಎಲ್ಲಾ ಶಾಲೆಗಳ ಮುಖ್ಯೋಪಾಧ್ಯಾಯರು ಅಗತ್ಯ ಕ್ರಮವಹಿಸಬೇಕಾಗುತ್ತದೆ.

ಪ್ರಸಕ್ತ ಸಾಲಿನ ಪರೀಕ್ಷಾ ನೊಂದಣಿ ಬಗ್ಗೆ ಸ್ಥಳೀಯವಾಗಿ ಸಾಕಷ್ಟು ಪ್ರಚಾರ ನೀಡಲು ತಿಳಿಸಿದೆ ಹಾಗೂ ಜನಪತಿನಿದಿಗಳಿಗೆ ಮಾಹಿತಿ ನೀಡಲು ಕ್‌ರಮ ಕೈಗೊಳ್ಳುವುದು, ದಾಖಲಾತಿ ಪ್ರಕ್ರಿಯೆಯನ್ನು Online ಮೂಲಕ ನಡೆಸುತ್ತಿರುವುದರಿಂದ, ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬಂದಿ ಈ ಮಾರ್ಗಸೂಚಿ / ಸುತ್ತೋಲೆಯನ್ನು ಅತಂತ ಸೂಕ್ಷ್ಮವಾಗಿ ಅವಲೋಕಿಸಿ, ಸೂಚನೆಗಳನ್ನು ಅನುಸರಿಸಿ ಕಾರ್ಯ ನಿರ್ವಹಿಸುವುದರೊಂದಿಗೆ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ತಿಳಿಸಿದೆ.

ಅರ್ಜಿ ಸಲ್ಲಿಸಲು ಅರ್ಹತೆ:

2025-26ನೇ ಸಾಲಿನಲ್ಲಿ ಆಯಾ ತಾಲ್ಲೂಕಿನ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಐದನೆಯ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅದೇ ತಾಲ್ಲೂಕಿನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಆಯಾ ತಾಲ್ಲೂಕಿನ ಖಾಯಂ ನಿವಾಸಿಗಳ ಮಕ್ಕಳು ಬೇರೆ ತಾಲ್ಲೂಕು/ಜಿಲ್ಲೆ/ರಾಜ್ಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರೂ ಸಹ 6ನೇ ತರಗತಿಗೆ ಮೂಲ ತಾಲ್ಲೂಕಿನಲ್ಲಿ ವ್ಯಾಸಂಗ ಮಾಡಲು ಇಚ್ಚಿಸಿದಲ್ಲಿ ಮೂಲ ತಾಲ್ಲೂಕಿನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಪರೀಕ್ಷೆಯ ವಿವರಗಳು:

ಆಯ್ಕೆ ಪರೀಕ್ಷೆಗೆ 5ನೇ ತರಗತಿಯ ಪಠ್ಯ ಪುಸ್ತಕ/ ಕಲಿಕಾ ಚೇತರಿಕೆ ಕಲಿಕಾಂಶಗಳನ್ನು ಆಧರಿಸಿ ಕನ್ನಡ (16%), ಆಂಗ್ಲಭಾಷೆ (16%), ಗಣಿತ(16%), ಪರಿಸರ ಅಧ್ಯಯನ(16%), ಸಮಾಜ ವಿಜ್ಞಾನ (16%), ಸಾಮಾನ್ಯ ಜ್ಞಾನ (ಜನರಲ್ ನಾಲೆಡ್ಸ್) (10%) ಮತ್ತು ಸಾಮಾನ್ಯ ಬೌದ್ಧಿಕ ಸಾಮರ್ಥ್ಯ (10%) -ಇವುಗಳನ್ನು ಪರಿಗಣಿಸಲಾಗುವುದು. ಪ್ರಶ್ನೆ ಪತ್ರಿಕೆಯು ವಸ್ತುನಿಷ್ಟ (Objective type) ಪ್ರಶ್ನೆಗಳನ್ನು ಹೊಂದಿದ್ದು, ಆಂಗ್ಲ ಮತ್ತು ಕನ್ನಡ ಮಾಧ್ಯಮಗಳಲ್ಲಿರುತ್ತವೆ. ಪರೀಕ್ಷೆಯಲ್ಲಿ ಒಂದು ಪ್ರಶ್ನೆಗೆ ತಲಾ 01 ಅಂಕದಂತೆ ಇದ್ದು 100 ಪ್ರಶ್ನೆಗಳಿರುತ್ತವೆ.

ಪರೀಕ್ಷೆಯ ಅವಧಿ 2 ಗಂಟೆ 30 ನಿಮಿಷಗಳು, ವಿದ್ಯಾರ್ಥಿಗಳು ಪರೀಕ್ಷೆ ಪ್ರಾರಂಭವಾಗುವ 30 ನಿಮಿಷಗಳು ಮುಂಚಿತವಾಗಿ ಪರೀಕ್ಷಾ ಕೇಂದ್ರದಲ್ಲಿನ ಕೊಠಡಿಗಳಲ್ಲಿ ಹಾಜರಿರಬೇಕು.

ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು/ಪೋಷಕರಿಗೆ ಸೂಚನೆಗಳು:

www.schooleducation.karnataka.gov.in www.vidyavahini.karnataka.gov.in ಸಲ್ಲಿಸಬಹುದಾಗಿದೆ. ವೆಬ್ ಪುಟಗಳ ಮೂಲಕ ಪೋಷಕರು Online ಅರ್ಜಿ ಸಲ್ಲಿಸಬಹುದಾಗಿದೆ.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆ), ಉಪನಿರ್ದೇಶಕರು (ಅಭಿವೃದ್ಧಿ), ಕೇತ ಶಿಕ್ಷಣಾಧಿಕಾರಿಗಳು ಮತ್ತು ಕೇತ್ರ ಸಮನ್ವಯಾಧಿಕಾರಿಗಳ ಕಛೇರಿ ಹಾಗೂ ಆದರ್ಶ ವಿದ್ಯಾಲಯಗಳಲ್ಲಿ ಪೋಷಕರು ಈ ಸೌಲಭ್ಯವನ್ನು ಬಳಸಿಕೊಂಡು ಉಚಿತವಾಗಿ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಸಲ್ಲಿಸಬಹುದು.

ಆಯಾ ತಾಲ್ಲೂಕಿನ ಖಾಯಂ ನಿವಾಸಿಗಳ ಮಕ್ಕಳು ಹೊರ ರಾಜ್ಯ / ಜಿಲ್ಲೆ/ ತಾಲ್ಲೂಕುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ವ್ಯಾಸಂಗ ಮತ್ತು ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರಗಳನ್ನು ಪಡೆದು Online ಮೂಲಕ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಪ್ರಮಾಣ ಪತ್ರಗಳನ್ನು ಅಳವಡಿಸುವುದನ್ನು (Upload) ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಪೂರಕವಾಗಿ ವಿದ್ಯಾರ್ಥಿಯು ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದು ಶಾಲೆಗೆ ದಾಖಲಾಗುವ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರದಿಂದ ಪಡೆದಿರುವ ವ್ಯಾಸಂಗ ಮತ್ತು ವಾಸಸ್ಥಳ ದೃಢೀಕರಣದ ಮೂಲ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.

ಮೀಸಲಾತಿಯನ್ನು ಪಡೆಯುವ ಮಕ್ಕಳು ಜಾತಿ ಪ್ರಮಾಣಪತ್ರದ ಆ‌ರ್.ಡಿ ಸಂಖ್ಯೆಯನ್ನು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನಮೂದಿಸಬೇಕು. ಇದಕ್ಕೆ ಪೂರಕವಾಗಿ ವಿದ್ಯಾರ್ಥಿಯು ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದು ಶಾಲೆಗೆ ದಾಖಲಾಗುವ ಸಂದರ್ಭದಲ್ಲಿ ಪ್ರಮಾಣಪತ್ರದ ಮೂಲ ಪ್ರತಿಯನ್ನು ಸಲ್ಲಿಸಬೇಕು.

ವಿಶೇಷ ಚೇತನ ಮಕ್ಕಳು ಮೀಸಲಾತಿಯನ್ನು ಪಡೆಯಲು ಸಕ್ಷಮ ಪ್ರಾಧಿಕಾರಗಳಿಂದ ಪಡೆದಿರುವ ಪ್ರಮಾಣಪತ್ರವನ್ನು online ಮೂಲಕ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಳವಡಿಸುವುದನ್ನು (upload) ಕಡ್ಡಾಯಗೊಳಿಸಲಾಗಿದೆ. ವಿದ್ಯಾರ್ಥಿಯು ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದು ಶಾಲೆಗೆ ದಾಖಲಾಗುವ ಸಂದರ್ಭದಲ್ಲಿ ಪ್ರಮಾಣಪತ್ರದ ಮೂಲ ಪ್ರತಿಯನ್ನು ಸಲ್ಲಿಸಬೇಕು. ನೀಡಲಾಗಿದೆ. www.vidyavahini.karnataka.gov.in

ಅಧಿಕಾರಿಗಳಿಗೆ ವಿಶೇಷ ಸೂಚನೆ

ಜಿಲ್ಲಾ ಹಂತದಲ್ಲಿ ಉಪನಿರ್ದೇಶಕರು (ಅಭಿವೃದ್ಧಿ) ರವರ ನೇತೃತ್ವದಲ್ಲಿ ಈ ಆಯ್ಕೆ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಅವರಿಗೆ ಬೇಕಾಗುವ ಎಲ್ಲಾ ಆಡಳಿತಾತ್ಮಕ ಸಹಕಾರವನ್ನು ಜಿಲ್ಲೆಯ ಎಲ್ಲಾ ಸ್ಥರದ ಅಧಿಕಾರಿಗಳು ಪ್ರಥಮ ಆದ್ಯತೆಯಾಗಿ ನೀಡುವುದು.

ಪ್ರಶ್ನೆ ಪತ್ರಿಕೆ ಹಾಗೂ OMR ತಯಾರಿಕೆ, ಮುದ್ರಣ, ವಿತರಣೆ, ಫಲಿತಾಂಶ ಸಿದ್ಧಪಡಿಸುವುದು ಮುಂತಾದ ಕಾರ್ಯಗಳನ್ನು ಕಾರ್ಯನಿರ್ವಾಹಕ ನಿರ್ದೇಶಕರು, ಕೆ.ಎಸ್.ಕ್ಯೂ.ಎ.ಎ.ಸಿ ಗೆ ವಹಿಸಲಾಗಿದ್ದು ಅವರು ನೀಡುವ ಸೂಚನೆಗಳನ್ವಯ ಕಾರ್ಯ ನಿರ್ವಹಿಸುವುದು.

ಪರೀಕ್ಷೆಯನ್ನು ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ಪರಿಣಾಮಕಾರಿಯಾಗಿ ನಡೆಸಲು ಸಭೆಗಳನ್ನು ನಡೆಸಿ ಸೂಚನೆಗಳನ್ನು ನೀಡುವುದರೊಂದಿಗೆ ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುವುದು.

ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ ಕೇಂದ್ರದಿಂದ ತಾಲ್ಲೂಕು ಖಜಾನೆಗೆ ಹಾಗೂ ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ, ಖುದ್ದಾಗಿ ಕೇತ್ರ ಶಿಕ್ಷಣಾಧಿಕಾರಿಗಳು ತಮ್ಮ ಕಛೇರಿಯ ಅಧಿಕೃತ ವಾಹನಗಳಲ್ಲಿಯೇ ರವಾನಿಸುವುದು. ಇದೇ ರೀತಿ ಉತ್ತರ ಪತ್ರಿಕೆಗಳನ್ನು ಸಹ ಜಿಲ್ಲಾ ಹಂತಕ್ಕೆ ಖುದ್ದಾಗಿ ಕೇತ್ರ ಶಿಕ್ಷಣಾಧಿಕಾರಿಗಳೇ ತಮ್ಮ ಕಛೇರಿಯ ಅಧಿಕೃತ ವಾಹನಗಳಲ್ಲಿಯೇ ರವಾನಿಸುವುದು.

ಅರ್ಜಿ ಸಲ್ಲಿಸಲು ಇಚ್ಚಿಸುವ ವಿದ್ಯಾರ್ಥಿಗಳು Online ಮೂಲಕ ಸಲ್ಲಿಸಬೇಕಾದ ದಾಖಲೆಗಳನ್ನು (ವ್ಯಾಸಂಗ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ) ಕೊನೆಯ ದಿನಾಂಕವರೆಗೆ ಕಾಯದೇ ಈಗಿನಿಂದಲೇ ಸಿದ್ಧಪಡಿಸಿ ಇಟ್ಟುಕೊಳ್ಳಲು ವ್ಯಾಪಕವಾಗಿ ಪ್ರಚಾರ ನೀಡುವುದು.

Parents should you admit your children to `Adarsha Vidyalaya'? Applications invited for 6th class admission
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಸರ್ಕಾರಿ ಶಿಕ್ಷಕರು, ಅಧಿಕಾರಿಗಳ ಸೇವಾ ವಿವರಗಳನ್ನು `EEDS’ ತಂತ್ರಾಂಶದಲ್ಲಿ ಇಂದೀಕರಣ : ಶಿಕ್ಷಣ ಇಲಾಖೆ ಮಹತ್ವದ ಆದೇಶ

23/01/2026 5:05 AM2 Mins Read

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು `ಜನಪ್ರತಿನಿಧಿ’ಗಳ ದೂರವಾಣಿ ಸಂಖ್ಯೆ ಇಟ್ಟುಕೊಳ್ಳುವುದು ಕಡ್ಡಾಯ

23/01/2026 5:01 AM1 Min Read

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಇಂದು ‘ರಾಷ್ಟ್ರೀಯ ಮತದಾರರ ದಿನ’ ಆಚರಣೆ ಕಡ್ಡಾಯ : ಸರ್ಕಾರ ಆದೇಶ

23/01/2026 5:00 AM1 Min Read
Recent News

BIG NEWS : ರಾಜ್ಯದ ಸರ್ಕಾರಿ ಶಿಕ್ಷಕರು, ಅಧಿಕಾರಿಗಳ ಸೇವಾ ವಿವರಗಳನ್ನು `EEDS’ ತಂತ್ರಾಂಶದಲ್ಲಿ ಇಂದೀಕರಣ : ಶಿಕ್ಷಣ ಇಲಾಖೆ ಮಹತ್ವದ ಆದೇಶ

23/01/2026 5:05 AM

ಪೋಷಕರೇ ನಿಮ್ಮ ಮಕ್ಕಳನ್ನು `ಆದರ್ಶ ವಿದ್ಯಾಲಯ’ಕ್ಕೆ ಸೇರಿಸಬೇಕಾ? ಇಂದಿನಿಂದ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ

23/01/2026 5:03 AM

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು `ಜನಪ್ರತಿನಿಧಿ’ಗಳ ದೂರವಾಣಿ ಸಂಖ್ಯೆ ಇಟ್ಟುಕೊಳ್ಳುವುದು ಕಡ್ಡಾಯ

23/01/2026 5:01 AM

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಇಂದು ‘ರಾಷ್ಟ್ರೀಯ ಮತದಾರರ ದಿನ’ ಆಚರಣೆ ಕಡ್ಡಾಯ : ಸರ್ಕಾರ ಆದೇಶ

23/01/2026 5:00 AM
State News
KARNATAKA

BIG NEWS : ರಾಜ್ಯದ ಸರ್ಕಾರಿ ಶಿಕ್ಷಕರು, ಅಧಿಕಾರಿಗಳ ಸೇವಾ ವಿವರಗಳನ್ನು `EEDS’ ತಂತ್ರಾಂಶದಲ್ಲಿ ಇಂದೀಕರಣ : ಶಿಕ್ಷಣ ಇಲಾಖೆ ಮಹತ್ವದ ಆದೇಶ

By kannadanewsnow5723/01/2026 5:05 AM KARNATAKA 2 Mins Read

ಬೆಂಗಳೂರು : ಇ.ಇ.ಡಿ.ಎಸ್. ತಂತ್ರಾಂಶದಲ್ಲಿ ಶಿಕ್ಷಕರ/ಅಧಿಕಾರಿಗಳ/ಬೋಧಕೇತರ ನೌಕರರ ಸೇವಾ ವಿವರಗಳನ್ನು ಗಣಕೀಕರಿಸಿ ಅಂತಿಮಗೊಳಿಸುವ ಬಗ್ಗೆ ರಾಜ್ಯ ಶಿಕ್ಷಣ ಇಲಾಖೆ ಮಹತ್ವದ…

ಪೋಷಕರೇ ನಿಮ್ಮ ಮಕ್ಕಳನ್ನು `ಆದರ್ಶ ವಿದ್ಯಾಲಯ’ಕ್ಕೆ ಸೇರಿಸಬೇಕಾ? ಇಂದಿನಿಂದ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ

23/01/2026 5:03 AM

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು `ಜನಪ್ರತಿನಿಧಿ’ಗಳ ದೂರವಾಣಿ ಸಂಖ್ಯೆ ಇಟ್ಟುಕೊಳ್ಳುವುದು ಕಡ್ಡಾಯ

23/01/2026 5:01 AM

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಇಂದು ‘ರಾಷ್ಟ್ರೀಯ ಮತದಾರರ ದಿನ’ ಆಚರಣೆ ಕಡ್ಡಾಯ : ಸರ್ಕಾರ ಆದೇಶ

23/01/2026 5:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.