ಶಾಲೆ, ಕಾಲೇಜು, ವಸತಿ ನಿಲಯ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಕ್ಕಳ ಮೇಲೆ ದೌರ್ಜನ್ಯ ನಡೆದರೆ ತಕ್ಷಣವೇ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಬಹುದು.
ಶಾಲೆ, ಕಾಲೇಜು, ವಸತಿ ನಿಲಯ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಕ್ಕಳ ಮೇಲೆ ನಡೆಯಬಹುದಾದಂತಹ ದೌರ್ಜನ್ಯಗಳಾದ ದೈಹಿಕ, ಮಾನಸಿಕ ಮತ್ತು ಲೈಂಗಿಕ ಕಿರುಕುಳ, ಬಾಲ್ಯವಿವಾಹ, ಭಿಕ್ಷಾಟನೆ, ಬಾಲಕಾರ್ಮಿಕ, ಕಾನೂನು ಬಾಹಿರ ದತ್ತು ಸೇರಿದಂತೆ ಮುಂತಾದ ಮಕ್ಕಳ ಹಕ್ಕುಗಳು ಉಲ್ಲಂಘನೆಯಾದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅಥವಾ ಬಳ್ಳಾರಿ ನಗರದ ಕಂಟೋನ್‌ಮೆAಟ್ ಪ್ರದೇಶದ ಶಾಂತಿಧಾಮ ಆವರಣದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ(ದೂ.08392-241373) ಕಚೇರಿಗೆ ಸಂರ್ಪಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುಭದ್ರದೇವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








