ಬೆಂಗಳೂರು: ಪರೇಶ್ ಮೇಸ್ತ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಇತ್ತೀಚೆಗೆ ಸಿಬಿಐ ತನಿಖಾ ವರದಿಯಲ್ಲಿ ಬಯಲಾಗಿತ್ತು. ಆದರೆ ಪರೇಶ್ ಮೇಸ್ತ ತಂದೆ ಕಮಲಾಕರ ಮೇಸ್ತ ನನ್ನ ಮಗನದ್ದು ಕೊಲೆ , ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಇದೀಗ ಮೇಸ್ತ ತಂದೆ ಕಮಲಾಕರ ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದು, ನನ್ನ ಮಗ ಪರೇಶ್ ಮೇಸ್ತ ಸಾವಿನ ಪ್ರಕರಣವನ್ನು ಮರು ತನಿಖೆಗೊಳಪಡಿಸಬೇಕು ಎಂದು ಬೊಮ್ಮಾಯಿಗೆ ಮನವಿ ಸಲ್ಲಿಸಿದ್ದಾರೆ. ಸಿಎಂ ಬೊಮ್ಮಾಯಿ ಕೂಡ ಮೇಸ್ತ ತಂದೆ ಮನವಿ ಸ್ವೀಕರಿಸಿದ್ದಾರೆ ಎನ್ನಲಾಗಿದೆ.
ಪ್ರಕರಣದ ಹಿನ್ನಲೆ:
2017ರ ಡಿಸೆಂಬರ್ 6ರಂದು ಹೊನ್ನಾವರದ ಮೀನುಗಾರ ಪರಮೇಶ್ ಮೇಸ್ತ ನಾಪತ್ತೆಯಾಗಿದ್ದ. ಇದಲ್ಲದೆ, ಡಿಸೆಂಬರ್ 8 ರಂದು ಹೊನ್ನಾವರ ನಗರದ ಶನಿ ದೇವಾಸ್ಥಾನದ ಹಿಂಭಾಗದ ಹಟ್ಟಿ ಕೆರೆಯಲ್ಲಿ ಶವ ಪತ್ತೆಯಾಗಿತ್ತು. ಇದು ಪಟ್ಟಣದಲ್ಲಿ ಉದ್ವಿಗ್ನ ವಾತಾವರಣವನ್ನು ಸೃಷ್ಟಿಸಿತು. 2017 ಡಿಸೆಂಬರ್ 11 ರಂದು ಮೇಸ್ತಾ ಅವರನ್ನು ಕೊಲ್ಲಲಾಯಿತು ಎಂಬ ಆರೋಪ ಕೇಳಿಬಂತು. ಕಾರವಾರ, ಹೊನ್ನಾವರ, ಕುಮಟಾ, ಮುಂಡಗೋಡದಲ್ಲಿ ಹಿಂದೂಪರ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದವು. ಕುಮಟಾದಲ್ಲಿ ಹಿಂದೂಪರ ಸಂಘಟನೆಗಳ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತು. ಐಜಿಪಿ ಅವರ ಕಾರಿಗೆ ಬೆಂಕಿ ಹಚ್ಚಲಾಯಿತು. ಪೊಲೀಸರ ಮೇಲೆ ಕಲ್ಲು ತೂರಾಟ ನಡೆಯಿತು. ಪೊಲೀಸರಿಗೆ ಗಾಯಗಳಾಗಿದ್ದವು, ವಾಹನಗಳು ಜಖಂಗೊಂಡಿದ್ದವು.
ಪರೇಶ್ ಮೇಸ್ತಾ ಅವರ ಸಾವಿನ ತನಿಖೆಯನ್ನು ಸಿಬಿಐಗೆ ವಹಿಸಲಾಗುವುದು ಎಂದು ಅಂದಿನ ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ವಿರೋಧ ಪಕ್ಷಗಳ ಹೋರಾಟಕ್ಕೆ ಮಣಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ. ಪೋಷಕರ ಒತ್ತಾಯದ ಮೇರೆಗೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು. ಈ ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿದೆ. ನಾಲ್ಕೂವರೆ ವರ್ಷಗಳ ಕಾಲ ತನಿಖೆ ನಡೆಸಿದ ನಂತರ ಸಿಬಿಐ ತನ್ನ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.
BREAKING NEWS : ಸುಗ್ರೀವಾಜ್ಞೆ ಮೂಲಕ ‘SC’, ‘ST’ ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆ ನಿರ್ಧಾರ
BIGG NEWS : ‘ವಿಜಯಪುರ ಏರ್ ಪೋರ್ಟ್’ ಗೆ ಬಸವೇಶ್ವರರ ಹೆಸರಿಡಲು ರಾಜ್ಯ ಸರ್ಕಾರ ತೀರ್ಮಾನ