ಬೆಂಗಳೂರು: ಇಂದಿನಿಂದ ಮಾರ್ಚ್.1ರವರೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಢಾಂಗಣದಲ್ಲಿ ಮಹಿಳಾ ಐಪಿಎಲ್ ಪಂದ್ಯಾವಳಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಕೆಲ ರಸ್ತೆಗಳಲ್ಲಿ ಸಂಚಾರ ನಿಷೇಧ ಮಾಡಲಾಗಿದೆ. ವಾಹನ ಸವಾರರಿಗೆ ಪರ್ಯಾಯ ಸಂಚಾರದ ಮಾರ್ಗದ ಮಾಹಿತಿಯನ್ನು ನೀಡಲಾಗಿದೆ.
ಈ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಟಾ ಐ.ಪಿ.ಎಲ್ 2024 ಕ್ರಿಕೆಟ್ TATA WPL-03 – 2025 ಕ್ರಿಕೆಟ್ ಪಂದ್ಯಾವಳಿಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಈ ಕೆಳಕಂಡಂತೆ ಸೂಕ್ತ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದೆ.
ದಿನಾಂಕ:21/02/2025 ರಿಂದ01.03.2025 ರವೆಗೆ ಸಂಜೆ 03.00 ಗಂಟೆಯಿಂದ ರಾತ್ರಿ 11.00 ವಾಹನಗಳ ನಿಲುಗಡೆ ನಿಷೇಧವಿರುವ ರಸ್ತೆಗಳ ವಿವರ.
1. ಕ್ಲೀನ್ಸ್ ರಸ್ತೆಯಲ್ಲಿ, ಬಾಳೇಕುಂದ್ರಿ ವೃತ್ತದಿಂದ ಕೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ.
2. ಎಂ.ಜಿ ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ಲೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ.
3. ಲಿಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ ವರೆಗೆ
4. ರಾಜಭವನ ರಸ್ತೆ, ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆಗಳಲ್ಲಿ.
5. ಸೆಂಟ್ರಲ್ ಸ್ಟ್ರೀಟ್ ರಸ್ತೆಯಲ್ಲಿ ರಸ್ತೆಯ ಎರಡೂ ಕಡೆ.
6. ಕಬ್ಬನ್ ರಸ್ತೆಯಲ್ಲಿ, ಸಿ.ಟಿ.ಓ. ವೃತ್ತದಿಂದ ಡಿಕೆನ್ಸ್ನ್ ರಸ್ತೆ ಜಂಕ್ಷನ್ ವರೆಗೆ ರಸ್ತೆಯ ಎರಡೂ ಕಡೆ, ಕಬ್ಬನ್ ರಸ್ತೆಯಲ್ಲಿ ಕಾಮರಾಜ ರಸ್ತೆ ಜಂಕ್ಷನ್‌ನಿಂದ ಡಿಕೆನ್ಸ್‌ನ್ ರಸ್ತೆ ಜಂಕ್ಷನ್ ವರೆಗೆ ಬಿ.ಎಂ.ಟಿ.ಸಿ ಬಸ್ ಗಳನ್ನು ಹೊರತುಪಡಿಸಿ ಇತರೆ ಎಲ್ಲಾ ತರಹದ ವಾಹನಗಳ ನಿಲುಗಡೆಯನ್ನು ನಿಷೇಧಿಸಿದೆ.
7. ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ, ಕ್ಯಾಶ್ ಫಾರ್ಮಸಿ ಜಂಕ್ಷನ್ ನಿಂದ ಅನಿಲ್ ಕುಂಬ್ಳೆ ವೃತ್ತದ ವರೆಗೆ.
8. ಮ್ಯೂಸಿಯಂ ರಸ್ತೆಯಲ್ಲಿ, ಎಂ.ಜಿ ರಸ್ತೆಯಿಂದ ಸೆಂಟ್ ಮಾರ್ಕ್ಸ್ ರಸ್ತೆ ವರೆಗೆ ಹಾಗೂ ಆಶಿರ್ವಾದಂ ವೃತ್ತದ ವರೆಗೆ
9. ಕಸ್ತೂರಬಾ ರಸ್ತೆಯಲ್ಲಿ, ಕ್ಲೀನ್ಸ್ ವೃತ್ತದಿಂದ ಹಡನ್ ವೃತ್ತದ ವರೆಗೆ ಹಾಗೂ ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್ ವೃತ್ತದವರೆಗೆ.
10.ಕಬ್ಬನ್‌ಪಾರ್ಕ್ ಒಳಭಾಗದ ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಮುಂಭಾಗ, ಪೌಂಟೇನ್ ರಸ್ತೆಗಳಲ್ಲಿ ವಾಹನಗಳ ಪಾರ್ಕಿಂಗ್ ಕಡ್ಡಾಯವಾಗಿ ನಿಷೇಧಿಸಲಾಗಿದೆ
11. ಲ್ಯಾವೆಲ್ಲಿ ರಸ್ತೆಯಲ್ಲಿ, ಕ್ಲೀನ್ ವೃತ್ತದಿಂದ ವಿಠಲ್ ಮಲ್ಯ ರಸ್ತೆ ಜಂಕ್ಷನ್‌ರೆಗೆ ವಾಹನಗಳ ನಿಲುಗಡೆಯನ್ನುನಿಷೇಧಿಸಲಾಗಿದೆ
12.ವಿಠಲ್ ಮಲ್ಯ ರಸ್ತೆ, ಸಿದ್ದಲಿಂಗಯ್ಯ ವೃತ್ತದಿಂದ ಸೆಂಟ್ ಮಾರ್ಕ್ಸ್ ರಸ್ತೆಯ ಬಿಷಪ್ ಕಾಟನ್ ಬಾಲಕೀಯರ ಶಾಲೆಯವರೆಗೆ ವಾಹನಗಳ ನಿಲುಗಡೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ಈ ಕೆಳಕಂಡ ರಸ್ತೆಗಳಲ್ಲಿ ಮಧ್ಯಾಹ್ನ 11-00 ಗಂಟೆಯಿಂದ ರಾತ್ರಿ 09-00 ಗಂಟೆವರೆಗೆ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿರುತ್ತದೆ.
1. ಪಂದ್ಯ ವೀಕ್ಷಣೆ ಮಾಡಲು ಬರುವ ಸಾರ್ವಜನಿಕರ ವಾಹನಗಳನ್ನು ಸೆಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನ ಮತ್ತು ಯು.ಬಿ.ಸಿಟಿ ನಿಲುಗಡೆ ಸ್ಥಳದಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
2. ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿಯಲ್ಲಿ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
3. ಕೆ.ಎಸ್.ಸಿ.ಎ. ಸದಸ್ಯರ ವಾಹನಗಳನ್ನು ಸೆಂಟ್ ಜೋಸೆಫ್ (ಯೂರೋಪಿಯನ್) ಬಾಲಕರ ಶಾಲೆ ಮೈದಾನ (ಮ್ಯೂಸಿಯಂ ರಸ್ತೆ) ಇಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
4. ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತ ಮುತ್ತ ವಾಹನಗಳ ನಿಲುಗಡೆ ಸ್ಥಳ ಕೊರತೆ ಇರುವುದರಿಂದ ಹಾಗೂ ಕ್ರೀಡಾಂಗಣ ಸುತ್ತ ಮುತ್ತ ಸಂಚಾರ ದಟ್ಟಣೆ ತಪ್ಪಿಸಲು ಕ್ರಿಕೆಟ್ ಪಂದ್ಯ ವೀಕ್ಷಣೆಗೆ ಬರುವ ಪ್ರೇಕ್ಷಕರು ಸಾಧ್ಯವಾದಷ್ಟು ಸಾರ್ವಜನಿಕ ಸಾರಿಗೆ (ಬಿ.ಎಂ.ಟಿ.ಸಿ) ವಾಹನಗಳನ್ನು ಹಾಗೂ ಮೆಟ್ರೋ ಸೇವೆಯನ್ನು ಬಳಸಲು ಕೋರಿದೆ.
5. ವಿಶೇಷ ಕರ್ತವ್ಯಕ್ಕೆ ನಿಯೋಜನೆ ಮಾಡಿರುವ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ವಾಹನಗಳನ್ನು ಕಬ್ಬನ್‌ಪಾರ್ಕ್ ಒಳಭಾಗದ ಕೆ.ಜಿ.ಐ.ಡಿ ಬಿಲ್ಡಿಂಗ್ ಮುಂಭಾಗದ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
ಚಿನ್ನಸ್ವಾಮಿ ಸ್ಟೇಡಿಯಂ ಒಳ ಮತ್ತು ಹೊರ ಹೋಗಲು ಪ್ರೇಕ್ಷಕರುಗಳಿಗೆ (ಪಾದಚಾರಿಗಳಿಗೆ) ಅನುವು ಮಾಡಿರುವ ಬಗ್ಗೆ :-
1. ಗೇಟ್‌ನಂ-1 ರಿಂದ ಗೇಟ್ ನಂ-6 ಕಬ್ಬನ್ ರಸ್ತೆಯಲ್ಲಿದ್ದು ಪಾದಚಾರಿಗಳಿಗೆ/ವೀಕ್ಷಕರುಗಳಿಗೆ ಹೋಗಲು ಅವಕಾಶ ಕಲ್ಪಿಸಿದೆ.
2.ಗೇಟ್ ನಂ.7 ರಿಂದ ಗೇಟ್ ನಂ 11 ರವರೆಗೆ ಲಿಂಕ್ ರಸ್ತೆಯಲ್ಲಿದ್ದು ಅನಿಲ್ ಕುಂಬ್ಳೆ ವೃತ್ತ ಮತ್ತು ಬಿ.ಆರ್.ವಿ. ವೃತ್ತದ ಕಡೆಯಿಂದ ಪ್ರೇಕ್ಷಕರುಗಳು/ಪಾದಚಾರಿಗಳು ಹೋಗಬಹುದಾಗಿರುತ್ತದೆ.
3. ಗೇಟ್ ನಂ. 12 ರಿಂದ 21 ವರೆಗೆ ಕ್ಲೀನ್ಸ್ ರಸ್ತೆಯಲ್ಲಿದ್ದು, ಇಲ್ಲಿಗೆ ಪಾದಚಾರಿ/ವೀಕ್ಷಕರುಗಳಿಗೆ ಪ್ರವೇಶವನ್ನು ಕಲ್ಪಿಸಲಾಗಿರುತ್ತದೆ.