ಹುಬ್ಬಳ್ಳಿ: ಹುಬ್ಬಳ್ಳಿ ರೈಲ್ವೆ ವಿಭಾಗದ ಕ್ಯಾಸಲ್ ರಾಕ್-ಲೋಂಡಾ ಮಾರ್ಗದಲ್ಲಿ ರೈಲ್ವೆ ವಿದ್ಯುದ್ದೀಕರಣ ಮತ್ತು ಇತರೆ ಎಂಜಿನಿಯರಿಂಗ್ ಕಾಮಗಾರಿಗಳು ನಡೆಯುತ್ತಿರುವುದರಿಂದ, ಮಿರಜ್-ಕ್ಯಾಸಲ್ ರಾಕ್-ಮಿರಜ್ ನಡುವಿನ ನಿತ್ಯದ ಕಾಯ್ದಿರಿಸದ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 17333/17334) ರೈಲುಗಳ ಭಾಗಶಃ ರದ್ದತಿಯನ್ನು ಏಪ್ರಿಲ್ 1, 2025 ರಿಂದ ಜೂನ್ 30, 2025 ರವರೆಗೆ ವಿಸ್ತರಿಸಲಾಗಿದೆ.
ರೈಲು ಸಂಖ್ಯೆ 17333 ಮಿರಜ್-ಕ್ಯಾಸಲ್ ರಾಕ್ ಡೈಲಿ ಕಾಯ್ದಿರಿಸದ ಎಕ್ಸ್ ಪ್ರೆಸ್ ರೈಲು ಜೂನ್ 30, 2025 ರವರೆಗೆ ಲೋಂಡಾ-ಕ್ಯಾಸಲ್ ರಾಕ್ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿರುತ್ತದೆ. ಈ ರೈಲು ಲೋಂಡಾ ನಿಲ್ದಾಣದಲ್ಲಿ ತನ್ನ ಪ್ರಯಾಣವನ್ನು ಅಂತ್ಯಗೊಳಿಸಲಿದೆ.
ರೈಲು ಸಂಖ್ಯೆ 17334 ಕ್ಯಾಸಲ್ ರಾಕ್-ಮಿರಜ್ ಡೈಲಿ ಕಾಯ್ದಿರಿಸದ ಎಕ್ಸ್ ಪ್ರೆಸ್ ರೈಲು ಜೂನ್ 30, 2025 ರವರೆಗೆ ಕ್ಯಾಸಲ್ ರಾಕ್-ಲೋಂಡಾ ನಡುವೆ ಭಾಗಶಃ ರದ್ದಾಗಿರುತ್ತದೆ ಈ ರೈಲು ಕ್ಯಾಸಲ್ ರಾಕ್ ಬದಲಿಗೆ ಲೋಂಡಾ ನಿಲ್ದಾಣದಿಂದ ತನ್ನ ಪ್ರಯಾಣವನ್ನು ಪ್ರಾರಂಭಿಸಲಿದೆ.
ಮೊದಲು, ಈ ರೈಲುಗಳನ್ನು ಭಾಗಶಃ ರದ್ದತಿಯನ್ನು ಮಾರ್ಚ್ 31, 2025 ರವರೆಗೆ ಸೂಚಿಸಲಾಗಿತ್ತು, ಆದರೆ, ಈಗ ಈ ಭಾಗಶಃ ರದ್ದತಿಯನ್ನು ಜೂನ್ 30, 2025 ರವರೆಗೆ ವಿಸ್ತರಿಸಲಾಗಿದೆ.
ಯುಗಾದಿ-ರಂಜಾನ್ ಹಬ್ಬದ ಪ್ರಯುಕ್ತ ವಿಶೇಷ ಬಸ್ ಸೇವೆ: ರಸ್ತೆಗಿಳಿಯಲಿವೆ 2000 ಹೆಚ್ಚುವರಿ ‘KSRTC ಬಸ್’